ಕಲಬುರಗಿ ಜಿಲ್ಲೆಯಾದ್ಯಂತ ಜೂನ್ 15ರವರೆಗೆ 144 ನಿಷೇಧಾಜ್ಞೆ ವಿಸ್ತರಣೆ

0
165

ಕಲಬುರಗಿ: ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆ ಯನ್ನು 2020ರ ಜೂನ್ 15 ರವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಕೊರೋನಾ ವೈರಸ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಈಗಾಗಲೇ ಕಲಬುರಗಿ ಜಿಲ್ಲೆಯಾದ್ಯಂತ 2020ರ ಮಾರ್ಚ್ 19ರ ರಾತ್ರಿ 8 ಗಂಟೆಯಿಂದ ಮೇ 31ರ ರಾತ್ರಿ 8 ಗಂಟೆಯವರೆಗೆ ಒಟ್ಟು 74 ದಿನಗಳವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ ಈಗ ಪರಿಸ್ಥಿತಿಯ ಅಗತ್ಯತೆಯನ್ನು ಮನಗಂಡು ಜಿಲ್ಲಾಧಿಕಾರಿಗಳು 2020ರ ಜೂನ್ 15ರ ವರೆಗೆ ನಿಷೇಧಾಜ್ಞೆ ಯನ್ನು ವಿಸ್ತರಿಸಿದ್ದಾರೆ.

Contact Your\'s Advertisement; 9902492681

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು, ಅನಾವಶ್ಯಕವಾಗಿ ಹಾಗೂ ಕಾರಣರಹಿತವಾಗಿ ಸಂಚರಿಸುವಂತಿಲ್ಲ ಮತ್ತು ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಸಹ ಖರೀದಿಸುವ ಅಗತ್ಯವಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದು, ಈ ಆದೇಶ ಅಗತ್ಯ ಸೇವೆಗಳಿಗೆ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here