ಶಹಾಪುರ (ಗ್ರಾ) : ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿ ನಿರ್ಮಿಸಿದ್ದ ವೀರರಾಣಿ ಕಿತ್ತೂರ ಚನ್ನಮ್ಮಾಜಿಯ ವೃತ್ತವನ್ನು ರಾತ್ರೋ ರಾತ್ರಿ ಕಿಡಿಗೇಡಿಗಳು ತೆರವುಗೊಳಿಸಿ ಅವಮಾನ ಮಾಡಿದ್ದಾರೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಶಹಾಪುರ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷರಾದ ದೇವಿಂದ್ರಪ್ಪ ತೋಟಗೇರ ಆಗ್ರಹಿಸಿದ್ದಾರೆ.
ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾಭಿಮಾನದ ಕಿಚ್ಚನ್ನು ಹೊತ್ತಿಸಿದ ವೀರವನಿತೆ ಕಿತ್ತೂರುರಾಣಿ ಚನ್ನಮ್ಮಾಜಿಯ ವೃತ್ತವನ್ನು ಸಿಂಧಗಿಯಲ್ಲಿ ನಿನ್ನೆ ರಾತ್ರೋರಾತ್ರಿ ತೆರವುಗೊಳಿಸಿರುವುದು ತುಂಬಾ ನೋವನ್ನುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವೃತ್ತವನ್ನು ತೆರವುಗೊಳಿಸಿದ ಕಿಡಿಗೇಡಿಗಳು ಯಾರೇ ಆಗಿರಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಈ ಮೂಲಕ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದವರಾದ ಮಲ್ಲಿಕಾರ್ಜುನ ಆವಂಟಿ,ಹೊನ್ನಪ್ಪ ಸಾಹು ಹೊಸುರು, ರಮೇಶ್ ಹೊಸೂರು,ಮಲ್ಲಿಕಾರ್ಜುನ್ ಕೊಳ್ಳೂರ,ಶರಣು ಬೇವಿನಹಳ್ಳಿ, ಅಶೋಕ್ ದಿಗ್ಗಿ,ಶಂಕರ್ ಕಡಗುಡ ಆಗ್ರಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…