ಮುಂಗಾರು ಹಂಗಾಮಿಗೆ: 99,671 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ

0
74

ಕಲಬುರಗಿ: ತಾಲೂಕಿನಲ್ಲಿ 2020-21 ನೇ ಸಾಲಿನ ಮುಂಗಾರು ಹಂಗಾಮಿಗಾಗಿ ತಾಲೂಕಿನ ವ್ಯಾಪ್ತಿಯಲ್ಲಿ ಒಟ್ಟು 99,671 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹಾಗೂ 3.64 ಲಕ್ಷ ಟನ್ ಉತ್ಪಾದನಾ ಗುರಿ ಹೊಂದಲಾಗಿದೆ ಎಂದು ಕಲಬುರಗಿ ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕಾಂತ ಜೀವಣಗಿ ಅವರು ತಿಳಿಸಿದ್ದಾರೆ.

ತಾಲೂಕಿನ ಪ್ರಮುಖವಾದ ಬೆಳೆಗಳಾದ ಹೈ.ಜೋಳ 90 ಹೆಕ್ಟೇರ್, ಮೆಕ್ಕೆಜೋಳ 900 ಹೆಕ್ಟೇರ್, ಸಜ್ಜೆ 1025ಹೆಕ್ಟೇರ್. ತೊಗರಿ 75500 ಹೆಕ್ಟೇರ್. ಉದ್ದು 3000 ಹೆಕ್ಟೇರ್, ಹೆಸರು 8000 ಹೆಕ್ಟೇರ್, ಸೂರ್ಯಕಾಂತಿ 1025 ಹೆಕ್ಟೇರ್, ಎಳ್ಳು 600 ಹೆಕ್ಟೇರ್, ಸೋಯಾಬಿನ್ 4050 ಹೆಕ್ಟೇರ್, ಹತ್ತಿ 2500 ಹೆಕ್ಟೇರ್, ಕಬ್ಬು 2686 ಹೆಕ್ಟೇರ್ ಹಾಗೂ ಇತರೆ ಬೆಳೆಗಳು 295 ಹೆಕ್ಟೇರ್ ಪ್ರದೇಶ ಸೇರಿದಂತೆ ಒಟ್ಟಾರೆ ಕಲಬುರಗಿ ತಾಲೂಕಿನಲ್ಲಿ ಮುಂಗಾರು ಹಂಗಾಮಿಗಾಗಿ 99,671 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕ್ಷೇತ್ರದ ಗುರಿ ಹಾಗೂ 3.64 ಲಕ್ಷ ಟನ್ ಉತ್ಪಾದನೆ ಗುರಿಯನ್ನು ಹೊಂದಲಾಗಿದೆ.

Contact Your\'s Advertisement; 9902492681

ಪ್ರಸಕ್ತ ಹಂಗಾಮಿಗಾಗಿ ಬೇಕಾಗುವ ರಸಗೊಬ್ಬರವನ್ನು ಎಲ್ಲಾ ಹೋಬಳಿಗಳ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ರಸಗೊಬ್ಬರ ಮಾರಾಟಗಾರರ ಮೂಲಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ರೈತರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ಮಾರಾಟಗಾರರ ಮೂಲಕ ಮಾತ್ರ ರಸಗೊಬ್ಬರವನ್ನು ಖರೀದಿಸಬೇಕು.

ಪ್ರಸಕ್ತ ಹಂಗಾಮಿನಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಒದಗಿಸಲು ಬಿತ್ತನೆ ಬೀಜಗಳಾದ ತೊಗರಿ, ಹೆಸರು, ಉದ್ದು, ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತು ಸೊಯಾಬಿನ್ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಪ್ರಸಕ್ತ ಕೊರೋನಾ ವೈರಸ್ (ಕೋವಿಡ್-19) ಪ್ರಯುಕ್ತ ರೈತ ಸಂಪರ್ಕ ಕೇಂದ್ರವಲ್ಲದೇ ಹೆಚ್ಚುವರಿ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಕಲಬುರಗಿ ತಾಲೂಕಿನಲ್ಲಿ ಸೋಮವಾರ (2020ರ ಜೂನ್ 1 ರಂದು) ಕಲಬುರಗಿ ಹೋಬಳಿ ವ್ಯಾಪ್ತಿಯಲ್ಲಿ 19 ಮಿ.ಮೀ., ಫರಹತಾಬಾದ ಹೋಬಳಿ ವ್ಯಾಪ್ತಿಯಲ್ಲಿ 48 ಮಿ.ಮೀ., ಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 9 ಮಿ.ಮೀ., ಅವರಾದ (ಬಿ) ಹೋಬಳಿ ವ್ಯಾಪ್ತಿಯಲ್ಲಿ 8 ಮಿ.ಮೀ., ಕಮಲಾಪೂರ ಹೋಬಳಿ ವ್ಯಾಪ್ತಿಯಲ್ಲಿ 2 ಮಿ.ಮೀ., ಮಹಾಗಾಂವ ಹೋಬಳಿ ವ್ಯಾಪ್ತಿಯಲ್ಲಿ 8 ಮಿ.ಮೀ. ಹಾಗೂ ಸಾವಳಗಿ (ಬಿ) ವ್ಯಾಪ್ತಿಯಲ್ಲಿ 10 ಮಿ.ಮೀ. ಮಳೆಯಾಗಿದೆ.

ಈ ಮಳೆಯಿಂದ ರೈತರು ತಮ್ಮ ಜಮೀನುಗಳನ್ನು ಬಿತ್ತನೆಗೆ ಪೂರ್ವ ತಯಾರಿಯನ್ನು ಕೈಗೊಳ್ಳಲು ಅನುಕೂಲಕರವಾದ ವಾತಾವರಣ ನಿರ್ಮಾಣವಾಗಿದೆ. ಕನಿಷ್ಠ 60 ರಿಂದ 80 ಮಿ.ಮೀ ಮಳೆಯಾದ ನಂತರ ಭೂಮಿಯು ಹದವಾಗಿ ಬಿತ್ತನೆಗೆ ಯೋಗ್ಯವಾಗುವುದರಿಂದ ತದನಂತರ ಬಿತ್ತನೆ ಕಾರ್ಯಕೈಗೊಳ್ಳಬಹುದಾಗಿದೆ ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here