ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿನ ಹನುಮಾನ ದೇವಸ್ಥಾನದ ಬಳಿಯಲ್ಲಿನ ವಿದ್ಯುತ್ ಪರಿವರ್ತಕ (ಟಿಸಿ) ಸುಟ್ಟು ಹೋಗಿ ಅನೇಕ ದಿನಗಳಾದರು ಇನ್ನೂ ಅಳವಡಿಸಿಲ್ಲ,ಇದರಿಂದ ಗ್ರಾಮದ ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ ಎಂದು ಕರವೇ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮರಡಿ ಬೇಸರ ವ್ಯಕ್ತಪಡಿಸಿದರು.
ನಗರಸಭೆ ಬಳಿಯ ವಿದ್ಯುತ್ ಗ್ರಾಹಕರ ದೂರು ಕೇಂದ್ರದ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ದೇವರಗೋನಾಲ ಗ್ರಾಮದಲ್ಲಿ ಸಾವಿರಕ್ಕು ಹೆಚ್ಚು ಮನೆಗಳಿಗೆ ಒಂದೆ ಟಿ.ಸಿಯಿಂದ ವಿದ್ಯುತ್ ಸರಬರಾಜಾಗುತ್ತದೆ ಹೀಗಾಗಿ ಟಿ.ಸಿ ಪದೆ ಪದೆ ಸುಟ್ಟು ಈಡಿ ಗ್ರಾಮವು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ ಹಲವು ಬಾರಿ ನಮ್ಮ ಸಂಘಟನೆಯಿಂದ ಗ್ರಾಮದ ಹನುವiಂತ ದೇವಸ್ಥಾನದ ಬಳಿ ಒಂದು ಟಿ.ಸಿ ಅಳವಡಿಸಲು ಮನವಿ ಮಾಡಲಾಗಿತ್ತು, ಇಲ್ಲಿಯವರೆಗೂ ಅಧಿಕಾರಿಗಳು ಯಾವುದೆ ಕ್ರಮ ಜರುಗಿಸದೆ ಇರುವುದು ದುರದೃಷ್ಟಕರವಾಗಿದೆ. ಈಗಲಾದರು ಅಧಿಕಾರಿಗಳು ಎಚ್ಚೆತ್ತುಕೊಂಡು ಹೆಚ್ಚುವರಿ ಟಿ.ಸಿ ಅಳವಡಿಸಬೇಕು ಇಲ್ಲವಾದಲ್ಲಿ ಸಹಾಯಕ ಕಾರ್ಯ ನಿರ್ವಾಹಕ ಅಧಿಕಾರಿಗಳ ಜೆಸ್ಕಾಂ ಉಪ ವಿಭಾಗದ ಕಛೇರಿ ಎದರು ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಹಾಯಕ ಕಾರ್ಯ ನಿರ್ವಾಹ ಅಧಿಕಾರಿ ಈರಣ್ಣ ಹಳಿಚಂಡಿ ಅವರಿಗೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಕರವೇ ತಾಲೂಕು ಉಪಾಧ್ಯಕ್ಷ ಶಿವುಮೊನಯ್ಯ ಎಲ್.ಡಿ.ನಾಯಕ, ಜಿಲ್ಲಾ ಸಂಘಟನ ಕಾರ್ಯದರ್ಶಿ ಭೀಮು ನಾಯಕ, ಶ್ರೀನಿವಾಸ ನಾಯಕ, ಹಣಮಂತ ಶಖಾಪುರ, ಆನಂದ ಮಾಚಗುಂಡಾಳ ಸೇರಿದಂತೆ ಇನ್ನಿತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…