ಕಲಬುರಗಿ : ನಮ್ಮ ದೇಶವನ್ನು ಅನೇಕ ರಾಜಮನೆಗಳು ಆಳ್ವಿಕೆ ಮಾಡಿವೆ. ಅದರಲ್ಲಿ ಕೆಲವು ಸಂಸ್ಥಾನಗಳು ಈಗಿನ ಪ್ರಜಾಪ್ರಭುತ್ವ ಸಕರ್ಾರ ಮಾಡುತ್ತಿರುವ ಕಾರ್ಯಗಳನ್ನು ನೂರಾರು ವರ್ಷಗಳ ಹಿಂದೆಯೇ ಮಾಡಿತೋರಿಸಿವೆ. ಅದರಲ್ಲಿ ಮೈಸೂರು ಒಡೆಯರ್ ಸಂಸ್ಥಾನವು ಪ್ರಮುಖವಾಗಿದೆ. ಈ ಸಂಸ್ಥಾನದಲ್ಲಿ ಅಭಿವೃದ್ಧಿ ಹೊಳೆಯನ್ನು ಹರಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ ಅವರು ಅಭಿವೃದ್ಧಿಯ ಹರಿಕಾರರಾಗಿ ಕಾರ್ಯನಿರ್ವಹಿಸಿದ್ದಾರೆಂದು ಜ್ಞಾನ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಸಂಗಮೇಶ ಸರಡಗಿ ಹೇಳಿದರು.
ನಗರದ ಕೆಎಚ್ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ ಹಾಗೂ ‘ಕೆಎಚ್ಬಿ ಗೆಳೆಯರ ಬಳಗ’ದ ವತಿಯಿಂದ ಗುರುವಾರ ಸರಳವಾಗಿ ಜರುಗಿದ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ’ಯಲ್ಲಿ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಮಾತನಾಡುತ್ತಿದ್ದರು.
ಉಪನ್ಯಾಸಕ ಎಚ್.ಬಿ.ಪಾಟೀಲ, ಚಿಂತಕ ಶಿವಕಾಂತ ಚಿಮ್ಮಾ ಮಾತನಾಡಿ, ಒಡೆಯರವರ ಆಡಳಿತಾವಧಿಯನ್ನು ‘ಸುವರ್ಣಯುಗ’ವೆಂದು ಕರೆಯುತ್ತಾರೆ. ‘ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ’, ಶಿವನ ಸಮುದ್ರದಲ್ಲಿ ಜಲವಿದ್ಯುತ್ ಯೋಜನೆ ಆರಂಭ, ಮಿಂಟೋ ಕಣ್ಣಿನ ಆಸ್ಪತ್ರೆ ಸ್ಥಾಪನೆ, ವಿದ್ಯುತ್ ದೀಪದ ಅಳವಡಿಕೆ, ವಾಣಿವಿಲಾಸ ಸಾಗರ ಅಣೆಕಟ್ಟಿನ ನಿಮರ್ಾಣ, ಮೈಸೂರಿನ ವಿಧಾನ ಪರಿಷತ್ತಿನ ರಚನೆ, ‘ಭಾರತೀಯ ವಿಜ್ಞಾನ ಸಂಸ್ಥೆ’ ಮತ್ತು ಎಸ್.ಬಿ.ಎಂ ಸ್ಥಾಪನೆ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಮೈಸೂರು ವಿಶ್ವವಿದ್ಯಾಲಯ, ರೇಲ್ವೆ ಸಾರಿಗೆ ಪ್ರಾರಂಭ ಹೀಗೆ ಅವರ ಆಡಳಿತಾವಧಿಯಲ್ಲಿನ ಸಾಧನೆಯ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ವಿಶ್ವೇಶ್ವರಯ್ಯನವರು ಇವರ ಅವಧಿಯಲ್ಲಿ ದಿವಾನರಾಗಿ ಉತ್ತಮವಾಗಿ ಸೇವೆ ಸಲ್ಲಿಸಿದರೆಂದರು.
ಕಾರ್ಯಕ್ರಮದಲ್ಲಿ ಬಸವರಾಜ ಹೆಳವರ್ ಯಾಳಗಿ, ಪ್ರಕಾಶ ಕುಲಕಣರ್ಿ, ಅಣ್ಣಾರಾಯ ಮಂಗಾಣೆ, ಅಮೃತ ನಾಯಕ, ಚಂದ್ರು ಮಲ್ಕಾಪುರೆ, ಶಿವಲೀಲಾ ಸಿ.ಮಲ್ಕಾಪುರೆ, ದಿಲೀಪ ಬಕರೆ, ರೇವಣಸಿದ್ದ ರುದ್ರವಾಡಿ, ಡಿ.ಆರ್.ಕುಲಕಣರ್ಿ, ತೇಜಶ್ವಿ ಸರಡಗಿ, ವಿಶಾಲ ಬೋಳಶೆಟ್ಟಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…