ಕಲಬುರಗಿ: ಇಂದು ಜಿಲ್ಲೆಗೆ ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗಾರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಲಾಬಿ ನಡೆಸುವುದಾಗಲಿ, ಗುಂಪುಗಾರಿಕೆ ಮಾಡುವದಾಗಲಿ ಇಲ್ಲ, ಬಿಜೆಪಿಗೆ ಇದು ಸೂಟ್ ಕೂಡಾ ಆಗಲ್ಲ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ ಅವರು, ಬಿಜೆಪಿಯಲ್ಲಿ ಯಾವುದೇ ಗುಂಪುಗಾರಿಕೆ ನಡೆದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಹಲವು ಶಾಸಕರು ಸಭೆ ಮಾಡಿ ಸಚಿವ ಸ್ಥಾನದ ಅಪೇಕ್ಷೆ ಇಟ್ಟಿದ್ದಾರೆ. ಅಷ್ಟಕ್ಕೆ ತಪ್ಪು ಎನ್ನಲು ಆಗದು, ಪಕ್ಷದ ವಿರುದ್ಧ ತೀರ್ಮಾನ ತೆಗೆದುಕೊಂಡರೆ ತಪ್ಪಾಗುತ್ತದೆ. ತಮ್ಮ ಭಾವನೆಗಳನ್ನು ಹಂಚಿಕೊಳ್ಳುವುದರಲ್ಲಿ ತಪ್ಪೇನಿದೆ ಎಂದರು.
ಬಿಜೆಪಿಯಲ್ಲಿ ವಲಸಿಗರು, ಮೂಲ ಬಿಜೆಪಿಗರು ಎನ್ನುವ ಪ್ರಶ್ನೆಯಿಲ್ಲ, ಯಾರಿಗೆ ಸ್ಥಾನ ಕೊಡಬೇಕೆಂಬುದನ್ನು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿಕೊಂಡರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…