ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಜಿಲ್ಲಾಧಿಕಾರಿ ಶರತ್ ಬಿ.

0
23

ಕಲಬುರಗಿ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಪೋಷಣೆ ಮಾಡುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡಬೇಕೆಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಕಿವಿ ಮಾತು ಹೇಳಿದರು.

ಅವರು ವಿಶ್ವಪರಿಸರ ದಿನಾಚರಣೆ ಅಂಗವಾಗಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಮಳೆಯ ಕೊರತೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ತಮ್ಮ ಮನೆಯ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಬೇಕೆಂದರು.

Contact Your\'s Advertisement; 9902492681

ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್‍ಕುಮಾರ್, ಡಿಸಿಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಂ. ವಾನತಿ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶರಣಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here