ಕಲಬುರಗಿ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಪೋಷಣೆ ಮಾಡುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡಬೇಕೆಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಕಿವಿ ಮಾತು ಹೇಳಿದರು.
ಅವರು ವಿಶ್ವಪರಿಸರ ದಿನಾಚರಣೆ ಅಂಗವಾಗಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ಸಂರಕ್ಷಣೆಯಿಂದ ಶುದ್ಧವಾದ ವಾತಾವರಣ ನಿರ್ಮಾಣ ಮಾಡಲು ಸಾಧ್ಯವಾಗಿದೆ. ಮಳೆಯ ಕೊರತೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ತಮ್ಮ ಮನೆಯ ಮುಂಭಾಗದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಬೇಕೆಂದರು.
ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ್‍ಕುಮಾರ್, ಡಿಸಿಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ಎಂ. ವಾನತಿ, ಅಪರ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶರಣಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…