ಬಿಸಿ ಬಿಸಿ ಸುದ್ದಿ

ಖರ್ಗೆಗೆ ರಾಜ್ಯಸಭೆ ಅಭ್ಯರ್ಥಿಯಾಗಿ ಕಣಕ್ಕೆ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ

ಕಲಬುರಗಿ: ಕೇಂದ್ರ ಮಾಜಿ ಸಚಿವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳು ಕಾಂಗ್ರೆಸ್ ಪಕ್ಷದ ಹಿರಿಯ ಅನುಭವಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಅಭ್ಯರ್ಥಿ ಎಂದು ಆಯ್ಕೆಗೊಳಿಸಿದ್ದಕ್ಕೆ ಎಐಸಿಸಿ ಅಧ್ಯಕ್ಷರಾದ ಸೋನಿಯಾಗಾಂಧಿ, ಎಐಸಿಸಿ ವರಿಷ್ಠ ನಾಯಕ ರಾಹುಲಗಾಂಧಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರ ಹಾಗೂ ರಾಜ್ಯದ ವರಿಷ್ಠ ನಾಯಕರಿಗೆ ಕೃತಙತೆ ಸಲ್ಲಿಸಲಾಯಿತು.

ಅದೇ ರೀತಿ ಅನುಭವಿ ಹಾಗೂ ಹಿರಿಯ ರಾಜಕಾರಣಿ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಖರ್ಗೆಯವರನ್ನು ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು ಈ ಅವಕಾಶವನ್ನು ನೀಡಿದ್ದಕ್ಕೆ ಕರ್ನಾಟಕ ರಾಜ್ಯಕ್ಕೆ ಮೇಲಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒಂದು ಆನೆಬಲ ನೀಡಿದಂತಾಗಿದ್ದು, ಮಲ್ಲಿಕಾರ್ಜುನ ಖರ್ಗೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಕಾರ್ಯಕರ್ತರು ತಿಳಿಸಿದರು.

ಎಐಸಿಸಿ ವರಿಷ್ಠ ನಾಯಕರು ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ರಾಜ್ಯಸಭೆಗೆ ಆಯ್ಕೆಗೊಳಿಸಿದ ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಕಾಳಗಿ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಭೀಮರಾವ ತೇಗಲತಿಪ್ಪಿ, ನಾರಾಯಣರಾವ ಕಾಳೆ, ಸಿ.ಎ. ಪಾಟೀಲ, ಭೀಮಣ್ಣಾ ಸಾಲಿ, ದೇವೆಂದ್ರಪ್ಪ ಮರತೂರ, ಆಲಮಖಾನ, ಕೃಷ್ಣಾಜಿ ಕುಲಕರ್ಣಿ, ಸುಭಾಷ ರಾಠೋಡ, ಜಿ. ವಿಜಯಕುಮಾರ, ನೀಲಕಂಠರಾವ ಮೂಲಗೆ, ಜಯಪ್ರಕಾಶ ಕಮಕನೂರ, ಮಹಾಂತಪ್ಪ ಸಂಗಾವಿ, ಚಂದ್ರಶೇಖರ ಸುಲ್ತಾನಪೂರ, ಮಜರಖಾನ, ಈರಣ್ಣಾ ಜಳಕಿ, ಮಾಪಣ್ಣಾ ಗಂಜಗೇರಿ, ಬಸವರಾಜ ಬೂದಿಹಾಳ, ಸಜ್ಜಾದ ಹುಸೇನ ಮೈನಾಳ, ಮಜರಖಾನ, ಶಾಮರಾವ ನಾಟೀಕಾರ, ರಾಜೀವ ಜಾನೆ, ಜಗನ್ನಾಥ ಗೋಧಿ, ಶಿವಕುಮಾರ ತೊಟ್ನಳ್ಳಿ, ಮಲ್ಲಿಕಾರ್ಜುನ ಸಾಗರ, ಚಂದ್ರಿಕಾ ಪರಮೇಶ್ವರ, ಲತಾ ರವಿ ರಾಠೋಡ, ವಾಣಿಶ್ರೀ ಸಗರಕರ, ಜ್ಯೋತಿ ಮರಗೋಳ, ಸಾಹೇರಾಬಾನು, ಗಿರೀಶ ಬೋರೆ, ಶರಣು ಡೋಣಗಾಂವ, ಶಿವಯೋಗಿ ಗುಂಡಗುರ್ತಿ, ಶಿವಾನಂದ ಪಾಟೀಲ ಮರತೂರ, ಸಂತೋಷ ಪಾಟೀಲ ಧನ್ನೂರ, ಶಿವಾನಂದ ಹೊನಗುಂಟಿ, ಬಾಬು ಒಂಟಿ, ಬಬ್ಲು ಚಿತ್ತಾಪೂರ, ಸಚೀನ ಶಿರವಾಳ, ಫಾರೂಕ ಹುಸೇನ ಮೈನಾಳ, ವಾಹೀದಲಿ ಫಾತೇಖಾನಿ, ಸೈಯ್ಯದ್ ಅಹ್ಮದ, ಸೈಯ್ಯದ್ ರಖೀಬ್, ಅಬ್ದುಲ್ ಅಜೀಜ ಖರಾದಿ ಇನ್ನೂ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago