ಶಹಾಬಾದ: ತಾಲೂಕಿನ ಗೋಳಾ(ಕೆ) ಗ್ರಾಮದ ನಿಜಾಮ ಬಜಾರ ಪ್ರದೇಶದಲ್ಲಿ 14 ವರ್ಷದ ಯುವಕನಿಗೆ ಕೊರೊನಾ ವೈರಸ್ ಖಚಿತಪಟ್ಟಿರುವ ಹಿನ್ನೆಲೆಯಲ್ಲಿ ನಿಜಾಮ ಬಜಾರದಲ್ಲಿ ಆತಂಕದ ಮನೆ ಮಾಡಿದೆ.
ಆ ಪ್ರದೇಶದಲ್ಲಿ ಮನೆಯಿಂದ ಈಗ ಹೊರಗೆ ಬರಲು ಭಯಭೀತರಾಗಿದ್ದಾರೆ. ಸೊಂಕಿತ ಪ್ರದೇಶವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ. ಬಡಾವಣೆಗೆ ಬರುವ ಸಂಪರ್ಕಿತ ರಸ್ತೆಗಳನ್ನು ಮುಳ್ಳಿನ ಕಂಟಿಗಳನ್ನು ಹಾಕಿ ಬಂದ್ ಮಾಡಲಾಗಿದೆ. ಸ್ಥಳಕ್ಕೆ ತಹಸೀಲ್ದಾರ ಸುರೇಶ ವರ್ಮಾ ಬೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಮಹಾರಾಷ್ಟ್ರದಿಂದ ಬಂದ ಸೊಂಕಿತ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗೆ ಗುರುವಾರ ಸಾಯಂಕಾಲ ಕಲಬುರಗಿ ಆಸ್ಪತ್ರೆಗೆ ಕಳಿಸಿಕೊಡಲಾಗಿದೆ.
ಸುಮಾರು 250 ಜನರು ಹೊಂದಿರುವ ಬಡಾವಣೆಯಲ್ಲಿ ಕರೆಂಟ್, ಕುಡಿಯುವ ನೀರು ತೊಂದರೆಯಾಗದಂತೆ ಎಲ್ಲಾ ಕ್ರಮಕೈಗೊಂಡಿದ್ದಾರೆ. ಎಲ್ಲಾ ನಾಗರಿಕ ಸೌಲಭ್ಯ ನೀಡಿದ್ದು, ಜನರು ಯಾವುದೇ ಕಾರಣಕ್ಕೂ ಹೊರಗೆ ಬರಬಾರದು ಎಂದು ತಿಳಿಹೇಳಿದ್ದಾರೆ.
ಡಿವಾಯ್‍ಎಸ್‍ಪಿ ವೆಂಕನಗೌಡ ಪಾಟೀಲ, ಪಿಐ ಅಮರೇಶ.ಬಿ, ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…