ಬಿಸಿ ಬಿಸಿ ಸುದ್ದಿ

ಸೋಮವಾರದಿಂದ ಶರಣಬಸವೇಶ್ವರರ ದರ್ಶನ ಆರಂಭ

ಕಲಬುರಗಿ: ಕೋವಿಡ್-19 ಕಾರಣದಿಂದ ಮೂರು ತಿಂಗಳುಗಳ ಕಾಲ ಏಕಾಏಕಿ ಮುಚ್ಚಲ್ಪಟ್ಟ 18 ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರ ದೇವಸ್ಥಾನವು ಸೋಮವಾರದಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ.

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾದ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರು, ದೇವಾಲಯವು ಬೆಳಗ್ಗೆ 7ಗಂಟೆಯಿಂದ 10 ಗಂಟೆವರೆಗೆ ಹಾಗೂ ಸಂಜೆ 5 ಗಂಟೆಯಿಂದ 8 ಗಂಟೆವರೆಗೆ ಸಾರ್ವಜನಿಕರು ದೇವರ ದರ್ಶನ ಪಡೆಯಬಹುದು. ಭಕ್ತಾದಿಗಳ ಸುರಕ್ಷಿತ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸೋಮವಾರ ಲಕ್ಷಾಂತರ ಜನರಿಗೆ ಶುಭದಿನವೆಂಬ ಭಾವನೆಯಿಂದಾಗಿ ಸಾವಿರಾರು ಭಕ್ತಾದಿಗಳು ಸೋಮವಾರದಂದು ದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಆಗಮಿಸುತ್ತಾರೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರದ ನಿರ್ದೇಶನದಂತೆ, ದೇವಾಲಯದ ಒಳಗಡೆ ಮತ್ತು ಹೊರಗಡೆ ಭಕ್ತರು ಸುರಕ್ಷಿತವಾಗಿ ದರ್ಶನ ಪಡೆಯುವ ಉದ್ದೇಶದಿಂದ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ. ದೇವಸ್ಥಾನದ ಆವರಣದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಡಾ. ಅಪ್ಪಾಜಿ ತಿಳಿಸಿದರು.

ದೇವಸ್ಥಾನದ ಪ್ರವೇಶದ್ವಾರದಲ್ಲಿ ಸ್ವಯಂಚಾಲಿತ ಸೋಂಕುನಿವಾರಕ ಯಂತ್ರವನ್ನು ಸ್ಥಾಪಿಸಲಾಗಿದೆ. ದೇವಸ್ಥಾನಕ್ಕೆ ಪ್ರವೇಶಿಸುವ ಮೊದಲು ಭಕ್ತಾದಿಗಳು ಕೈಗವಚ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಸ್ವಯಂಸೇವಕರ ಸಹಾಯದಿಂದ ಹ್ಯಾಂಡ್ ಸ್ಯಾನಿಟೈಜರ್ ಒದಗಿಸಲಾಗುತ್ತದೆ. ದೇವಸ್ಥಾನದ ಗರ್ಭಗುಡಿಯ ಆವರಣವನ್ನು ಪ್ರವೇಶಿಸುವ ಮೊದಲು ಭಕ್ತಾದಿಗಳ ದೈಹಿಕ ತಾಪಮಾನ ತಪಾಸಣೆ ಮಾಡಲಾಗುತ್ತದೆ.

ದೇವಾಲಯಕ್ಕೆ ಭೇಟಿ ನೀಡುವಾಗ ಭಕ್ತರು ಸಾಮಾಜಿಕ ಅಂತರ ಹಾಗೂ ಮಾಸ್ಕ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾಸ್ಕ ಧರಿಸದವರಿಗೆ ದೇವಸ್ಥಾನದಲ್ಲಿ ಪ್ರವೇಶಸುವದಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ಡಾ. ಅಪ್ಪಾಜಿ ಹೇಳಿದರು.

ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳು ಸರ್ಕಾರದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದೇವಸ್ಥಾನದ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಡಾ. ಅಪ್ಪಾಜಿ ಮತ್ತು ಮಾತೋಶ್ರೀ ದಾಕ್ಷಾಯಿಣಿ ಅವ್ವಾಜಿ ಅವರು ಭಕ್ತರಲ್ಲಿ ಮನವಿ ಮಾಡಿಕೊಂಡ್ಡಿದಾರೆ. ಭಕ್ತರಿಗೆ ತೆಂಗಿನಕಾಯಿ ಒಡೆಯಲು ಮತ್ತು ಪೂಜೆಗಳನ್ನು ಮಾಡಲು ಅನುಮತಿಯಿರುವುದಿಲ್ಲ. ಕೇವಲ ಶ್ರೀ ಶರಣಬಸವೇಶ್ವರ ಸಮಾಧಿಯ ದರ್ಶನ ಮತ್ತು ಸಂಸ್ಥಾನದ ಹಿಂದಿನ ಪೀಠಾಧಿಪತಿಗಳ ಸಮಾಧಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನೀಲಕುಮಾರ ಬಿಡವೆ ಅವರು ದೇವಾಲಯದಲ್ಲಿ ಬ್ಯಾರಿಕೇಡ್ ಸ್ಥಾಪಿಸುವಲ್ಲಿ ಮತ್ತು ಭದ್ರತಾ ಕ್ರಮಗಳ ಮೇಲ್ವಿಚಾರಣೆ ಕಾರ್ಯ ಕೈಗೊಂಡರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

51 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

53 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

58 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago