ಕಲಬುರಗಿ: ಭಯೋತ್ಪಾದನೆಯ ಎಂಬುವದು ಸಮಸ್ಯೆ ಕೇವಲ ಜಮ್ಮು ಮತ್ತು ಕಾಶ್ಮೀರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ, ಅದು ದೇಶವ್ಯಾಪಿಯ ಪ್ರಮುಖ ಸಮಸ್ಯೆಯಾಗಿ ಕಾಡುತ್ತಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ. ನಿರಂಜನ ನಿಷ್ಠಿ ಹೇಳಿದರು.
ಶರಣಬಸವ ವಿಶ್ವವಿದ್ಯಾಲಯದ ಇಸಿಇ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಆಂಟಿ ಟೆರಿರಿಸಂ ಡೇ(ಭಯೋತ್ಪಾದನಾ ವಿರೋಧಿ ದಿನ) ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ಪಾಕಿಸ್ತಾನದಿಂದ ಯಾವುದೇ ಒಳ್ಳೆಯ ನೀರಿಕ್ಷೆ ಇಟ್ಟುಕೊಳ್ಳಬಾರದು ಆ ರಾಷ್ಟ್ರವು ಅಲ್ಪ ಸಂಖ್ಯಾತರ ಹೆಸರಲ್ಲಿ ಹೇಯ ಕೃತ್ಯಗಳನ್ನು ನಡೆಸುತ್ತಿದೆ ಆದ್ದರಿಂದ ಯುವ ಜನತೆ ಈ ಕೃತ್ಯದಲ್ಲಿ ಭಾಗಿಯಾಗದಂತೆ ಸಂರಕ್ಷಿಸಬೇಕಾಗಿದೆ ಎಂದರು.
ಅತಿಥಿಯಾಗಿ ಆಗಮಿಸಿದ್ದ ಬ್ರಹ್ಮಪೂರ ಠಾಣೆಯ ಸರ್ಕಲ್ ಇನಸ್ಪೆಕ್ಟರ್ ಪ್ರಸಾದ ಗೊಖಲೆ ಮಾತನಾಡಿ, ಯುವ ಜನತೆ ಹೆಚ್ಚಾಗಿ ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಭಯೋತ್ಪಾದನೆಯಂತಹ ಚಟುವಟಿಕೆಯ ಸಮಸ್ಯೆಗಳನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸುವ ಮೂಲಕ ಅವರಲ್ಲಿ ಜಾಗೃತಿ ಅರಿವು ಮೂಡಿಸಬೇಕಾಗಿದೆ. ಇಂತಹ ಕೃತ್ಯಗಳಿಂದ ಸಮಾಜದಲ್ಲಿ ಪ್ರಾಣ ಹಾನಿ ಮತ್ತು ಆರ್ಥಿಕ ಹಾನಿ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಮಾತನಾಡಿ, ಮಕ್ಕಳಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಉನ್ನತ ಶಿಕ್ಷಣ ಪಡೆದವರೇ ಮಾನಸಿಕವಾಗಿ ಕುಂಠಿತಗೊಳ್ಳುತ್ತಿದ್ದಾರೆ. ಶಿಕ್ಷಣದಲ್ಲಿ ಮಾನಸಿಕ ಸ್ಥೈರ್ಯ ಮತ್ತು ಭಯೋತ್ಪಾದನಾ ಚಟುವಟಿಕೆಗಳಂತ ಹೇಯ ಕೃತ್ಯಗಳ ಕೆಟ್ಟ ಪರಿಣಾಮದ ಬಗ್ಗೆ ತಿಳಿವಳಿಕೆ ನೀಡುವುದು ಅನಿವಾರ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗದಿರುವಂತೆ ಪ್ರತಿಜ್ಞಾ ವಿಧಿ ಭೋಧಿಸಲಾಯಿತು. ವಿವಿಯ ಸಮ ಕುಲಪತಿ ಡಾ. ವಿ.ಡಿ.ಮೈತ್ರಿ, ಡೀನ್ ಡಾ. ಲಕ್ಷ್ಮೀ ಮಾಕಾ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಟಿ.ವಿ.ಶಿವಾನಂದನ್ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…