22 ರವರೆಗೆ ಕಲಬುರಗಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನ ನಿಷೇಧ

0
72

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-19) ಹರಡವಿಕೆಯನ್ನು ತಡೆಗಟ್ಟಲು ಹಾಗೂ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳ ಮತ್ತು ದೇವಾಲಯದ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಅಫಜಲಪುರ ತಾಲೂಕಿನ ದೇವಲಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನ ಹಾಗೂ ಘತ್ತರಗಿಯ ಭಾಗ್ಯವಂತಿ ದೇವಸ್ಥಾನಗಳಲ್ಲಿ 2020ರ ಜೂನ್ 8 ರಿಂದ 22ರವರೆಗೆ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶರತ್ ಬಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

Contact Your\'s Advertisement; 9902492681

ಈ ದೇವಾಲಯಗಳಿಗೆ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವರು. ಈ ದೇವಾಲಯಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ್ದಲ್ಲಿ ಭಕ್ತಾದಿಗಳಿಂದ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಷ್ಟಕರವಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯ ಸಂಹಿತೆ 1973 ರ ಕಲಂ 144 ರನ್ವಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here