ಅಶೋಕ್‌ ಗಸ್ತಿ ಅವರಿಗೆ ರಾಜ್ಯಸಭಾ ಟಿಕೆಟ್‌: ರಾಜ್ಯ ಸವಿತಾ ಸಮುದಾಯದ ಹರ್ಷ

ಬೆಂಗಳೂರು: ಸವಿತಾ ಸಮುದಾಯದ ಪ್ರಮುಖ ಮುಖಂಡರಾಗಿರುವ ಶ್ರೀಯುತ ಅಶೋಕ ಗಸ್ತಿ ಅವರಿಗೆ ರಾಜ್ಯಸಭಾ ಟಿಕೆಟ್‌ ಘೋಷಣೆ ಯಾಗಿರುವುದು ಶೋಷಿತ ಅಶಕ್ತ ಸಮುದಾಯಕ್ಕೆ ಸಿಕ್ಕ ಮಾನ್ಯತೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಸಂದ ಗೆಲವು ಎಂದು ರಾಜ್ಯ ಸವಿತಾ ಸಮಾಜದ ಅಧ್ಯಕ್ಷರಾದ ಎನ್ ಸಂಪತ್‌ ಕುಮಾರ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ಸವಿತಾ ಸಮಾಜಕ್ಕೆ ಸೇರಿದ ಹಿರಿಯ ನಾಯಕ ರಾಯಚೂರಿನ ಬಿಜೆಪಿ ಮುಖಂಡ ಅಶೋಕ ಗಸ್ತಿ ಅವರನ್ನು ರಾಜ್ಯ ಸಭೆಯ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇಲ್ಲಿಯವರೆಗೆ ಸವಿತಾ ಸಮಾಜಕ್ಕೆ ಸೇರಿದ ಕರ್ನಾಟಕದ ಯಾರೋಬ್ಬರೂ ಇಂತಹ ಹುದ್ದೆಗೆ ಆಯ್ಕೆಯಾಗಿಲ್ಲ. ರಾಜಕೀಯವಾಗಿ ತೀರಾ ಹಿಂದುಳಿದಿರುವ ಈ ಸಮುದಾಯಕ್ಕೆ ಬಿಜೆಪಿ ನಾಯಕತ್ವ ಮಾನ್ಯತೆ ನೀಡಿರುವುದು ಬಹಳ ಸಂತಸದ ವಿಷಯವಾಗಿದೆ.

ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿpತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ಸಂಘಟನಾ ಕಾರ್ಯದರ್ಶಿ ಸಂತೋಷ್‌ ಜಿ, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್‌ ಕುಮಾರ್‌ ಕಟೀಲ್‌ ಮುಖಂಡರಾದ ಈಶ್ವರಪ್ಪ, ಅಶ್ವಥ್‌ ನಾರಾಯಣ ಸೇರಿ ಎಲ್ಲಾ ನಾಯಕರಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ಹೇಳಿದರು.

ಅದೇ ರೀತಿ ಅತ್ಯಂತ ಸಾಮಾನ್ಯ ಕುಟುಂಬದಲ್ಲಿ ಜನಿಸಿ ಸಂಘಪರಿವಾರ ಮತ್ತು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಅಶೋಕ ಗಸ್ತಿ ಅವರಿಗೆ ಅಭಿನಂದನೆಗಳು. ತೀರಾ ಹಿಂದುಳೀದ ಸವಿತಾ ಸಮಾಜದ ಮುಖಂಡರಾಗಿ ಸಮಾಜದ ಏಳಿಗೆಗಾಗಿ ಹಲವು ಜನಪರ ಕಾರ್ಯಗಳನ್ನು ಮಾಡುತ್ತಾ ಬಂದಿರುವ ತಾವು ಈಗ ದೊರೆತಿರುವ ಸದಾವಕಾಶ ಬಳಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸುತ್ತೇವೆ.

ಸವಿತಾ ಸಮಾಜದ ಕಾರ್ಯಾಧ್ಯಕ್ಷ ಎಸ್‌ ಕಿರಣ್‌ ಸಂಪತ್‌ ಕುಮಾರ್‌ ಮಾತನಾಡಿ, ನಮ್ಮ ಸಮಾಜದ ಬಹುದಿನದ ಬೇಡಿಕೆಯಾದ ಸವಿತಾ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡಬೇಕೆಂದ ಹೋರಾಟ ಮುಂದುವರೆಸಬೇಕು. ಇದರಲ್ಲಿ ಸವಿತಾ ಸಮಾಜ ಒಗ್ಗಟ್ಟಿನಿಂದ ನಿಮ್ಮ ಜೊತೆಗೆ ನಿಲ್ಲುತ್ತದೆ ಎಂದು ಹೇಳುತ್ತಾ ಮತ್ತೋಮ್ಮೆ ಅಭಿನಂದನೆ ಸಲ್ಲಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago