ಬಿಸಿ ಬಿಸಿ ಸುದ್ದಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸೂಸುತ್ರಕ್ಕೆ ಶಾಸಕ ಗುತ್ತೇದಾರ ಸಭೆ

ಕಲಬುರಗಿ: ಕೊರೋನಾ ಕಾರಣದಿಂದ ಮೂಂದೂಡಲ್ಪಟ್ಟಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಈ ತಿಂಗಳ 25ರಿಂದ ಆರಂಭಗೊಳ್ಳಲಿರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮಕೈಗೊಳ್ಳಬೇಕೆಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಧಿಕಾರಿಗಳಿಗೆ ಸೂಚಿಸಿದರು.

ಸೋಮವಾರ ತಹಸೀಲ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪುರಸಭೆ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸ್ಯಾನಿಟೈಜರ್ ಮಾಡಿಸಬೇಕು ಎಂದು ಹೇಳಿದರು.

ಪರೀಕ್ಷಾ ಕೇಂದ್ರಕ್ಕೆ ಬರುವಾಗ ವಿದ್ಯಾರ್ಥಿಗಳು ಕಾಯಿಸಿ ಆರಿಸಿದ ನೀರನ್ನು ತರಲು ಮತ್ತು ಪರೀಕ್ಷಾ ಕೇಂದ್ರದಲ್ಲಿ ಆಹಾರ ವಿತರಿಸುವ ವ್ಯವಸ್ಥೆಯನ್ನು ದಾನಿಗಳಿಂದ ಅಥವಾ ಪಾಲಕರಿಂದ ಮಾಡಿಸಲು, ಪರೀಕ್ಷಾ ಅವಧಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸಹಕರಿಸುವುದು, ಪರೀಕ್ಷಾ ಕೇಂದ್ರದಲ್ಲಿ ಕಲಂ 144ನೇ ಜಾರಿಗೊಳಿಸುವುದು, ಮಹಾರಾಷ್ಟ್ರದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಯಲ್ಲಿ ವ್ಯವಸ್ಥೆ ಸೇರಿದಂತೆ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಕರು ಫೋನ್ ಮೂಲಕ ಮಾತನಾಡಿ ಆತ್ಮಸ್ಥೈರ್ಯ ತುಂಬಲು ನಿರ್ಧರಿಸಲಾಯಿತು.

ಪರೀಕ್ಷಾ ಭಯ ನಿವಾರಿಸುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಆರಂಭಿಸಿ ಅದಕ್ಕೆ ಮರೇಪ್ಪ ಬಡಿಗೇರ, ಶರಣಯ್ಯ ಸ್ವಾಮಿ ಅವರನ್ನು ನೇಮಿಸಿಲಾಯಿತು. ಮಾಸ್ಕ್ ಮತ್ತು ಸ್ಯಾನಿಟೈಜರ್ ಸರ್ಕಾರದಿಂದ ಬಂದಿವೆ ಅಗತ್ಯ ಕಂಡು ಬಂದಲ್ಲಿ ದಾನಿಗಳಿಂದ ಪಡೆಯಲು ಸಲಹೆ ನೀಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರವಹಿಸಬೇಕು ಅಲ್ಲದೆ ಕೋಣೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾವಹಿಸಬೇಕು. ಸಾರಿಗೆ ಇಲಾಖೆಯವರು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್ ಒಡಿಸಬೇಕು ಮತ್ತು ವಿದ್ಯಾರ್ಥಿಗಳಿಂದ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳಬೇಕು ಎಂದರು.

ಪೊಲೀಸ್ ಇಲಾಖೆಯವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ವ್ಯಾಪಕ ಪೊಲೀಸ್ ಬಂದೋಬಸ್ತ ನೀಡಬೇಕು ಎಂದು ಸೂಚಿಸಿದರು. ಮಕ್ಕಳು ಬಹಳ ದಿನಗಳಾದ ಮೇಲೆ ಶಾಲೆಗಳ ಕಡೆ ಬರುತ್ತಿರುವುದರಿಂದ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಆಗಬೇಕು ಎಂದು ಹೇಳಿದರು.
ಸಭೆಯಲ್ಲಿ ಸಹಾಯಕ ಆಯುಕ್ತ ರಾಮಚಂದ್ರ ಗಡದ, ತಹಸೀಲದಾರ ದಯಾನಂದ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರಪ್ಪ ನೇರಡಗಿ, ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸಂಜಯರೆಡ್ಡಿ, ಡಿವೈಎಸಪಿ ಮಲ್ಲಿಕಾರ್ಜುನ ಸಾಲಿ, ಪುರಸಭೆ ಮುಖ್ಯಾಧಿಕಾರಿ ಬಾಬುರಾವ ವಿಭೂತೆ, ಟಿಎಚ್‍ಓ ಡಾ. ಅಭಯಕುಮಾರ ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago