ಆಳಂದ: ತಾಲೂಕಿನ ಖಜೂರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜಗಳ ವಿತರಣೆಗೆ ಖಜೂರಿ ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಚಾಲನೆ ನೀಡಿದರು.
ಸೋಮವಾರ ಇಲಾಖೆಯ ಕಚೇರಿಯಲ್ಲಿ ಬಿತ್ತನೆ ಬೀಜ ವಿತರಿಸಿ ಮಾತನಾಡಿದ ಅವರು, ಸರ್ಕಾರದ ನಿಯಮಾವಳಿಯಂತೆ ಪ್ರತಿ ರೈತರಿಗೂ ಬೀಜ, ಗೊಬ್ಬರ ವಿತರಿಸಬೇಕು ಅಲ್ಲದೇ ಈ ಕುರಿತು ರೈತರಿಂದ ಯಾವುದೇ ರೀತಿಯ ದೂರುಗಳು ಬರದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಉಪಾಧ್ಯಕ್ಷ ಗುರುನಾಥ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ, ಪ್ರಗತಿಪರ ರೈತ ಆದಿನಾಥ ಹೀರಾ, ಮುಖಂಡ ಭೀಮರಾವ ಢಗೆ, ಮಹಾದೇವ ವಾಡೆ, ರಾಜು ಪಾಟೀಲ ಆಳಂಗಾ, ಉದಯಕುಮಾರ ಕಂದಗೂಳೆ, ಪ್ರಫುಲ ಬಾಬಳಸೂರೆ, ಕುಮಾರ ಬಂಡೆ, ಕಿರಣ ಮುರುಮೆ, ಕೃಷಿ ಅಧಿಕಾರಿ ಬಿರಾದಾರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…