ಕಲಬುರಗಿ: ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ನಂತರ ಕೇಂದ್ರ ಸಚಿವರಾಗಿ ಅಪಾರ ಅನುಭವ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ಹಾಗೂ ದೇಶದ ಪರ ಧ್ವನಿ ಎತ್ತಲು ಅವಕಾಶ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಹಾಗೂ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಧನ್ಯವಾದ, ಈ ಅವಕಾಶವನ್ನು ಬಳಸಿಕೊಂಡು ಖರ್ಗೆಯವರು ನಾಡಿನ ಶ್ರಯೋಭಿವೃದ್ದಿಗೆ ಶ್ರಮಿಸಲಿದ್ದಾರೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಿಲ್ಲಿ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ತಿಳಿಸಿದ ಶಾಸಕರು, ” 40 ವರ್ಷಗಳ ಕಾಲ ರಾಜ್ಯದ ಶಾಸಕರಾಗಿ, ಸಚಿವರಾಗಿ, 10 ವರ್ಷಗಳ ಕಾಲ ಸಂಸದರಾಗಿ, ಕೇಂದ್ರ ಮಂತ್ರಿಯಾಗಿ ರಾಜ್ಯದ ಜನರ ಸೇವೆ ಸಲ್ಲಿಸಿದ ನಮ್ಮ ತಂದೆಯವರು, ಮುಂದೆಯೂ ರಾಜ್ಯದ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಂಡು ಜನರ ಸೇವೆ ಮಾಡಲಿದ್ದಾರೆ ” ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
” ಇಡೀ ಕರ್ನಾಟಕದ ಜನರು, ಅದರಲ್ಲೂ ಕಲ್ಯಾಣ ಕರ್ನಾಟಕದ ಜನತೆ ನಮ್ಮ ತಂದೆಯವರು ಹಾಗೂ ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಮತ್ತು ಅಭಿಮಾನಕ್ಕೆ ನಾವೆಂದಿಗೂ ಅಭಾರಿಯಾಗಿದ್ದೇವೆ. ಮುಂದೆಯೂ, ನಾಡಿನ ಹಾಗೂ ನಾಡಿನ ಜನತೆಯ ಶ್ರೇಯೋಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಶ್ರಮಿಸಲಿದ್ದೇವೆ” ಎಂದು ಪ್ರಿಯಾಂಕ್ ಖರ್ಗೆ ನುಡಿದಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…