ಕಲಬುರಗಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಕಚೇರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿ ಸಂಘದ ಕಾರ್ಯಕ್ಕೆ ಚಾಲನೆ ನೀಡಿದ್ದು, ಮುಂದಿನ ೪ ತಿಂಗಳಲ್ಲಿ ಮುಖ್ಯಮಂತ್ರಿಗಳ ಆಶಯದಂತೆ ಪ್ರದೇಶದಲ್ಲಿ ಹಾಕಿಕೊಳ್ಳಲಾಗುವ ಜನಪರ ಕಾರ್ಯಕ್ರಮಗಳ ರೂಪುರೇಷೆ ಸಿದ್ಧವಾಗಲಿದೆ ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ್ ಪಾಟೀಲ್ ಸೇಡಂ ಅವರು ತಿಳಿಸಿದರು.
ಮಂಗಳವಾರ ಇಲ್ಲಿನ ಐವಾನ್-ಎ-ಶಾಹಿ ರಸ್ತೆಯಲ್ಲಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದರು.
ಪ್ರದೇಶದ ಮಾನವ ವಿಕಸನ ಮತ್ತು ಸಂಸ್ಕಾರ ಒಳಗೊಂಡಂತೆ ಸಮಗ್ರ ಅಭಿವೃದ್ಧಿಗೆ ಪ್ರತಿ ಹಳ್ಳಿಯನ್ನು ಘಟಕವನ್ನಾಗಿ ಪರಿಗಣಿಸಿ ಕಾರ್ಯಕ್ರಮಗಳ ಉಸ್ತುವಾರಿಗೆ ಸಂಘದಿಂದ ಓರ್ವನನ್ನು ಪ್ರತಿನಿಧಿಯಾಗಿ ನೇಮಿಸಲಾಗುವುದು. ಅದೇ ರೀತಿಯಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಗಳು ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ ಒಂದು ತಿಂಗಳಲ್ಲಿ ಆಡಳಿತ ಮಂಡಳಿ ಸಭೆ ಸೇರಿ ೫೦೦ ಕೋಟಿ ರೂ. ಮೊತ್ತಕ್ಕೆ ಕ್ರಿಯಾ ಯೋಜನೆ ಸಿದ್ದಪಡಿಸಲಾಗುವುದು ಎಂದರು.
ಕೃಷಿ, ಶಿಕ್ಷಣ, ಸಾಹಿತ್ಯ, ಸ್ವಯಂ ಉದ್ಯೋಗ, ಆರೋಗ್ಯ, ಯುವಜನ ಮತ್ತು ಮಹಿಳಾ ಸಬಲೀಕರಣ, ಗ್ರಾಮ ಸಬಲೀಕರಣ ಹೀಗೆ ನಾನಾ ಕ್ಷೇತ್ರದಲ್ಲಿ ಸಂಘವು ಕಾಯೋನ್ಮುಖವಾಗಲಿದೆ. ಪ್ರತಿ ಗ್ರಾಮ ಪಂಚಾಯತಿಯಲ್ಲಿ ೧, ಪಟ್ಟಣ ಪಂಚಾಯತಿಯಲ್ಲಿ ೨, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ೩ ಹಾಗೂ ನಗರ ಪ್ರದೇಶದಲ್ಲಿ ವಾರ್ಡ್‌ವಾರು ಮಹಿಳೆಯರಿಗೆ ಹೊಲಿಗೆ ತರಬೇತಿ ಕೇಂದ್ರ ತೆಗೆಯಲಾಗುವುದು. ಕೋಟಿ ವೃಕ್ಷ ಯೋಜನೆಯಡಿ ೬ ಜಿಲ್ಲೆಗಳಲ್ಲಿ ಒಂದು ಕೋಟಿ ವಿವಿಧ ಬಗೆಯ ಗಿಡ ಮರಗಳನ್ನು ಮತ್ತು ೧೦ ಲಕ್ಷ ಹಣ್ಣಿನ ಗಿಡಗಳನ್ನು ನೆಡಲಾಗುವುದು ಎಂದು ಡಾ.ಬಸವರಾಜ ಪಾಟೀಲ ಸೇಡಂ ವಿವರಿಸಿದರು.
ಪ್ರಸ್ತುತ ಆಡಳಿತ ಮಂಡಳಿಯಲ್ಲಿ ೧೫ ಜನ ಸದಸ್ಯರಿದ್ದಾರೆ. ಇದಲ್ಲದೆ ಕಲ್ಯಾಣ ಕರ್ನಾಟಕ ಭಾಗದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಒಳಗೊಂಡ ೬ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿ.ಇ.ಓ. ಹಾಗೂ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು ಇದಕ್ಕೆ ವಿಶೇಷ ಆಹ್ವಾನಿತ ಸದಸ್ಯರಾಗಿರುತ್ತಾರೆ. ಸಂಘಕ್ಕೆ ವಿವಿಧ ಕ್ಷೇತ್ರಗಳಲ್ಲಿ ಪರಿಣಿತಿ ಮತ್ತು ಅನುಭವ ಹೊಂದಿರುವ ಕೊಪ್ಪಳದ ಗವಿಸಿದ್ದೇಶ್ವರ, ಐ.ಎ.ಎಸ್. ಅಧಿಕಾರಿ ಮದನಗೋಪಾಲ್, ಕೃಷಿ ತಜ್ಞ ಎಸ್.ಎ.ಪಾಟೀಲ, ಗುರುರಾಜ ಕರಜಗಿ ಹಾಗೂ ವಿಜಯಪುರದ ಚಾಣಕ್ಯ ಸ್ಪರ್ಧಾ ತರಬೇತಿ ಕೇಂದ್ರದ ಎಂ.ಎನ್.ಬಿರಾದಾರ ಅವರನ್ನು ಆಡಳಿತಾತ್ಮಕ ಸಲಹೆಗಾರರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
೫೦೦೦ ಕೃಷಿಕರಿಗೆ ತರಬೇತಿ: ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ೫೦ ಸಾವಯವ ಕೃಷಿ ಕೇಂದ್ರಗಳನ್ನು ಸ್ಥಾಪಿಸಿ ಅದರ ಮುಖೇನ ೫೦೦೦ ಸಾವಯವ ಕೃಷಿಕರನ್ನು ಗುರುತಿಸಿ ತರಬೇತಿ ಮತ್ತು ಪ್ರೋತ್ಸಾಹ ನೀಡಲಾಗುತ್ತದೆ. ಕೃಷಿಯಲ್ಲಿ ತಂತ್ರಜ್ಞಾನದೊಂದಿಗೆ ಮುಂದುವರೆದ ದೇಶಗಳಿಗೆ ರೈತರ ಪ್ರವಾಸ ಏರ್ಪಡಿಸುವ ಯೋಜನೆಯೂ ನಮ್ಮ ಮುಂದಿದೆ ಎಂದರು.
ಸಂಸ್ಕಾರ ಕೇಂದ್ರ: ಯುವ ಸಮುದಾಯದಲ್ಲಿ ಸಂಸ್ಕಾರ ಬೆಳವಣಿಗೆಗೆ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಸಂಸ್ಕಾರ ಕೇಂದ್ರ ತೆರೆಯಲಾಗುವುದು.
೩ ಲಕ್ಷ ಜನರಿಗೆ ಉದ್ಯೋಗ: ಮುಂದಿನ ಮೂರು ವರ್ಷಗಳಲ್ಲಿ ೩ ಲಕ್ಷ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಗುರಿ ಸಂಘ ಹೊಂದಿದೆ. ಇದು ಸಣ್ಣ-ಪುಟ್ಟ ಉದ್ಯೋಗ ಮಾಡುವವರಿಗೆ ಮಾಲೀಕರನ್ನಾಗಿಸುವ ಯೋಜನೆ ಇದಾಗಿದೆ.
ಜನಸ್ಪಂದನಾ ವಿಭಾಗ: ಕಲಬುರಗಿಯ ಸಂಘದ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಜನಸ್ಪಂದನ ವಿಭಾಗ ಎಂದು ಪ್ರಾರಂಭಿಸಿ ಅದರ ಮುಖಾಂತರ ಈ ಭಾಗದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸ್ಪಂದನೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಾಗುತ್ತದೆ.
ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗೆಳ್ಳಿ, ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರೆಡ್ಡಿ ಪಾಟೀಲ ಹಾಗೂ ವಿಕಾಸ ಅಕಾಡೆಮಿಯ ಭಾರತಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…