ಅಂಗನವಾಡಿ ಕೇಂದ್ರಗಳಲ್ಲಿ ಅವ್ಯವಹಾರ : ಕ್ರಮಕ್ಕೆ ಆಗ್ರಹಿಸಿ ಮನವಿ ಪತ್ರ

0
69

ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಮತ್ತು ಮೊಟ್ಟೆ ಸಮರ್ಪಕವಾಗಿ ನೀಡದೇ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಧಿಕಾರಿಗಳು ಅವ್ಯವಹಾರ ನಡೆಸುತ್ತಿದ್ದು, ಕೂಡಲೇ ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ನಯ ಸವೆರ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡದೆ ಕೇವಲ ಸುಳ್ಳು ದಾಖಲೆಗಳು ಸೃಷ್ಟಿಸಿ ಮಕ್ಕಳಿಗೆ ಸಮರ್ಪಕವಾಗಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಅಕ್ರಮ ವೆಸಗಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Contact Your\'s Advertisement; 9902492681

ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಕೂಡ ಮೇಲಾಧಿಕಾರಿಗಳು ಅನ್ಯಾಯವನ್ನು ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅಂಗನವಾಡಿ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿವೆ.

ಮನೆ ಬಾಡಿಗೆ, ಅಡುಗೆ ಅನಿಲ ಪೂರೈಕೆ, ವಿದ್ಯುತ್ ಬಿಲ್ ಪಾವತಿ ಮುಂತಾದವರು ಸಕಾಲದಲ್ಲಿ ಆಗದೆ ವಿಳಂಬ ನೀತಿ ಅನುಸರಿಸುತ್ತಿರುವ ಪರಿಣಾಮ ಅಂಗನವಾಡಿ ಕಾರ್ಯಕರ್ತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ದೂರಿದರು.
ಅಂಗನವಾಡಿ ಕೇಂದ್ರಗಳಿಗೆ ನಡೆಯುತ್ತಿರುವ ಅವ್ಯವಹಾರ ಮತ್ತು ಕಳೆದ ಒಂದು ವರ್ಷ ಅವಧಿಯಲ್ಲಿನ ಮೊಟ್ಟೆ ಪೂರೈಕೆ ಕುರಿತು ತನಿಖೆಗೆ ಒಪ್ಪಿಸಬೇಕು ಎಂದು ನಯ ಸವೆರ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು. ಒಂದು ವೇಳೆ ವಿಳಂಬ ನೀತಿ ಅನುಸರಿಸಿದರೇ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಬೇಕಾಮಾಡಗುತ್ತದೆ ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಮೋದಿನ್ ಪಟೇಲ್ ಅಣಬಿ, ಸಲೀಂ ಅಹ್ಮದ್ ಚಿತಾಪುರ, ಸಜಿದ್ ಅಲಿ ರಂಜೋಳವಿ, ಸೈರಾ ಬಾನು ಹೈದರಲಿ ಇನಮ್ದಾರ್, ಸಲೀಂ ಸಗರಿ, ವಾಹಿದ್ ಸಾಬ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here