ಸರಕಾರಿ ನೌಕರರ ತುಟ್ಟಿ ಭತ್ಯೆ ಹಾಗೂ ಆರ್ಥಿಕ ಸೌಲಭ್ಯಗಳನ್ನು ರದ್ದುಪಡಿಸಿರುವ ವಿರೋಧಿಸಿ ಮನವಿ

0
700

ಕಲಬುರಗಿ : ಸರಕಾರಿ ನೌಕರರ ತುಟ್ಟಿ ಭತ್ಯೆ ಹಾಗೂ ಆರ್ಥಿಕ ಸೌಲಭ್ಯಗಳನ್ನು ರದ್ದುಪಡಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಕರ್ನಾಟಕ ರಾಜ್ಯದ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘ ಜಿಲ್ಲಾ ಘಟಕದ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ಪದ್ಮಿನಿ ಕಿರಣಗಿ ಅವರು ಮಾತನಾಡಿ, ಮಹಾಮಾರಿ ಕೋವಿಡ್-೧೯ ನಿಯಂತ್ರಣಕ್ಕಾಗಿ ವೈದ್ಯರು, ಅರೆ ವೈದ್ಯಕೀಯ, ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ತಮ್ಮ ಕುಟುಂಬದ ಜವಾಬ್ದಾರಿಯನ್ನು ಮರೆತು ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವಲ್ಲಿ ಪಣತೊಟ್ಟು ದುಡಿಯುತ್ತಿದ್ದಾರೆ. ಆದರೆ ರಾಜ್ಯ ಸರಕಾರ ನೌಕರರ ತುಟ್ಟಿ ಭತ್ಯೆ ಹಾಗೂ ಇತರೆ ಸೌಲಭ್ಯಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿರವ ಕ್ರಮಕ್ಕೆ ಖಂಡಿಸಿದರು.

Contact Your\'s Advertisement; 9902492681

ಕಳೆದ ಮೂರು ತಿಂಗಳಿನಿಂದ ಒಂದು ರಜೆಯನ್ನು ಪಡೆಯದೇ ಮಹಾಮಾರಿ ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಕಾರ್ಯನಿರ್ವಹಿಸುತ್ತಿದ್ದಾರೆ ಇಂತಹ ಮಾನವಿಯ ಮೌಲ್ಯದ ಸೇವೆಯನ್ನು ರಾಜ್ಯ ಸರಕಾರ ಪರಿಗಣಿಸದೇ ಆರೋಗ್ಯ ಇಲಾಖೆ ನೌಕರರ ಮೇಲೆ ಅನ್ಯಾಯ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೆರೆಯ ತೆಲಂಗಾಣ ರಾಜ್ಯದಲ್ಲಿ ಆರೋಗ್ಯ ಮತ್ತು ಪೊಲೀಸ್ ಸೇರಿದಂತೆ ಕೋವಿಡ್-೧೯ ರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಮತ್ತು ಗುತ್ತಿಗೆ ನೌಕರದಾರರಿಗೆ ವೇತನದ ೧೦% ರಷ್ಟು ಹೆಚ್ಚಿನ ಪ್ರೋತ್ಸಾಹ ಧನವನ್ನು ನೀಡಿ ಆದೇಶಿಸಿದೆ. ಇದೇ ಮಾದರಿಯನ್ನು ರಾಜ್ಯ ಸರಕಾರವು ಅನುಸರಿಸಿ ಪ್ರೋತ್ಸಾಹಿಸಿ ಕೂಡಲೇ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಘಳಿಕೆ ರಜೆ ನಗದಿಕರಣ ಹಾಗೂ ಇತರೆ ಆರ್ಥಿಕ ಸೌಲಭ್ಯಗಳನ್ನು ರದ್ದುಪಡಿಸಿರುವ ಆದೇಶವನ್ನು ಪುನರ ಪರಿಶಿಸಿ ಮತ್ತೊಮ್ಮೆ ಆದೇಶ ಹೊರಡಿಸಬೇಕು ಎಂದು ಅವರು ಆಗ್ರಹಿಸಿದರು.

೬ನೇ ವೇತನದ ಆಯೋಗದ ಎರಡನೇ ವರದಿಯಲ್ಲಿ ವೇತನ ತಾರತಮ್ಯ ಸರಿಪಡಿಸಲು ಅನುಮೋದನೆ ಇದ್ದರು ಸರಕಾರ ತಿರಸ್ಕೃರಿಸಿದ್ದು, ಇದನ್ನು ಈ ಕೂಡಲೇ ಮರು ಆದೇಶಿಸಿ, ಆರೋಗ್ಯ ಇಲಾಖೆ ಸಮಸ್ತ ನೌಕರರಿಗೆ ಪ್ರೋತ್ಸಾಹ, ಮಾನಸಿಕ ಹಾಗೂ ನೈತಿಕ ಸ್ಥೈರ್ಯ ತುಂಬಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಪ್ರಧಾನ ಕಾರ್ಯದರ್ಶಿ ವಿಠ್ಠಲ ಬಡಿಗೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here