ಬಿಸಿ ಬಿಸಿ ಸುದ್ದಿ

ದಲಿತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕದಿದ್ದರೆ ಉಗ್ರ ಹೋರಾಟ: ಮಲ್ಲಿಕಾರ್ಜುನ ಕ್ರಾಂತಿ

ಸುರಪುರ: ತಾಲೂಕಿನ ಅನೇಕ ಗ್ರಾಮಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ.ಇದಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗು ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಎಚ್ಚರಿಸಿದರು.

ನಗರದ ಪೊಲೀಸ್ ಠಾಣೆ ಮುಂದೆ ಸಾಂಕೇತಿಕ ಮೌನ ಪ್ರತಿಭಟನೆ ನಡೆಸಿ ಮಾತನಾಡಿ,ದಲಿತರ ಮೇಲಿನ ಹಲ್ಲೆಯನ್ನು ಕುರಿತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಜೂನ್ ೦೯ ರಂದು ಮಹಾತ್ಮ ಗೌತಮ್ ಬುದ್ಧ ವೃತ್ತದಲ್ಲಿ ಅಮರಣಾಂತ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ತಿಳಿಸಲಾಗಿತ್ತು.ಆದರೆ ರಾಜ್ಯದಲ್ಲಿ ಕೋವಿಡ್-೧೯ ಲಾಕ್‌ಡೌನ್ ಇರುವುದರಿಂದ ಕಾನೂನು ಉಲ್ಲಂಘನೆ ಆಗಬಾರದೆಂದು ಮತ್ತು ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಂ.ಪಾಟೀಲ ಅವರು ನಮ್ಮೆಲ್ಲ ಬೇಡಿಕೆಗಳನ್ನು ಕೆಲ ದಿನಗಳಲ್ಲಿ ಈಡೇರಿಸುವ ಭರವಸೆ ನೀಡಿದ್ದರಿಂದ ಇಂದು ಪೊಲೀಸ್ ಠಾಣೆಗೆ ಬಂದು ಮನವಿ ಮಾಡುತ್ತಿದ್ದೇವೆ.ಜೂನ್ ೩೧ಕ್ಕೆ ಲಾಕ್‌ಡೌನ್ ಮುಗಿಯಲಿದೆ,ಇದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು,ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ತಿಳಿಸಿ ಜಿಲ್ಲಾಧಿಕಾರಿಗಳು ಹಾಗು ಜಿಲ್ಲಾ ಪೊಲೀಸ್ ವರಿಷ್ಠರಿಗೆ ಬರೆದ ಮನವಿಯನ್ನು ಪಿಐ ಎಸ್.ಎಂ.ಪಾಟೀಲ್ ಅವರ ಮೂಲಕ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಪಿಐ ಎಸ್.ಎಮ್.ಪಾಟೀಲ್ ಅವರು ಮಾತನಾಡಿ,ನಿಮ್ಮ ಈ ಬೇಡಿಕೆಗಳನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಿಗಿ,ಜಿಲ್ಲಾ ಸಂಘಟನಾ ಸಂಚಾಲಕ ಅಜೀಜ್ ಈಕೂರ,ಮರಲಿಂಗಪ್ಪ ನಾಟೆಕಾರ್,ರಮೇಶ ಹುಂಡೆಕಲ್,ಮಾನಪ್ಪ ಬಿಜಾಸ್ಪೂರ,ಬಸವರಾಜ ಶೆಳ್ಳಿಗಿ,ಮಹೇಶ ಸುಂಗಲಕರ್,ಜೆಟ್ಟೆಪ್ಪ ನಾಗರಾಳ,ಮಹುಮೂದಸಾಬ್ ಇತರರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago