ಬಿಸಿ ಬಿಸಿ ಸುದ್ದಿ

ಲಾಕ್‌ಡೌನ್: ಇಲಾಖೆ ನಿಯಮ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಬಿಆರ್‌ಪಿ ಅಧಿಕಾರಿ ಅಮಾನತ್ತು

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕೇಂದ್ರ, ಕಲಬುರಗಿ ದಕ್ಷಿಣ ವಲಯದ ಬಿಆರ್‌ಪಿ ಅಧಿಕಾರಿಗಳಾದ ಮಹೇಶ ಹೂಗಾರ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಾಂತಗೌಡ ಅವರು ಅಮಾನತ್ತು ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಿಆರ್‌ಪಿ ಹುದ್ದೆ ಪದೋನ್ನತಿ ಹೊಂದಿದವರು ಯಾವುದೇ ಸಂಘ ಸಂಸ್ಥೆಗಳ ಪದಾಧಿಕಾರಿ ಸ್ಥಾನವನ್ನು ಹೊಂದಿರಬಾರದು ಎಂಬ ನಿಮಯ ಉಲ್ಲಂಘಿಸಿ ಮಹೇಶ ಹೂಗಾರ ಅವರು ಶಿಕ್ಷಕರ ಪತ್ತಿನ ಸಂಘದ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಹಾಗೆಯೇ ಲಾಕ್‌ಡೌನ್ ಸಂದರ್ಭದಲ್ಲಿ ಐಪಿಸಿ ೧೪೪ ನಿಮಯ ಉಲ್ಲಂಘಿಸಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕೂಡಲೇ ಅವರ ಮೇಲೆ ಇಲಾಖೆ ನಿಯಮಾನುಸಾರ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಮೂಲಗೆ ಹಾಗೂ ಕಾರ್ಯದರ್ಶಿ ಬಾಬು ಮೌರ್ಯ ಅವರು ಉಪನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

ದೂರನ್ನು ಕುಲಂಕುಶವಾಗಿ ಪರಿಶೀಲಿಸಿದ ಉಪನಿರ್ದೇಶಕರು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು ೧೯೬೬ ರ ನಿಮಯಮ೩(೧) ಉಪನಿಯಮ ೧ ರಿಂದ ೩ವರೆಗೆ ಉಲ್ಲಂಘನೆಯಾಗಿದೆ ಎಂದು ಮಹೇಶ ಹೂಗಾರ ಅವರನ್ನು ಮುಂದಿನ ಆದೇಶದವದರೆಗೆ ಅಮಾನತ್ತು ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago