ಕಲಬುರಗಿ: ಕಲ್ಲು ಬಂಡೆಗಳ ಕೆಳಗೆ ಮುಚ್ಚಿಟ್ಟ ವ್ಯಕ್ತಿಯ ಶವ ಮಂಗಳವಾರ ಇಲ್ಲಿನ ವಾಡಿ ಪಟ್ಟಣದ ನಾಲವಾರ ವ್ಯಾಪ್ತಿಯ ಸಂಕನೂರು ಮಾರ್ಗದಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಕಲ್ಲುಗಳ ಕೆಳಗೆ ಮುಚ್ಚಿಟ್ಟ ಮೃತ ದೇಹ ಪುರಷನದ್ದು ಎಂಬುದು ಹೊರಗೆ ಕಾಣಿಸುತ್ತಿದ್ದ ಬಟ್ಟೆಗಳಿಂದ ಗುರುತಿಸಲಾಗಿದೆ. ಘಟನೆ ಎರಡ್ಮೂರು ದಿನಗಳ ಹಿಂದೆಯೇ ನಡೆದಿದೆ ಎನ್ನಲಾಗಿದ್ದು, ಕೊಳೆತ ದೇಹದಿಂದ ಹರಡಿದ ದುರ್ವಾಸನೆಯಿಂದ ಘಟನೆ ಬೆಳಕಿಗೆ ಬಂದಿದೆ.
ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿರುವ ಚಿತ್ತಾಪುರ ಸಿಪಿಐ ಪಂಚಾಕ್ಷರಿ ಸಾಲಿಮಠ, ವಾಡಿ ಠಾಣೆ ಪಿಎಸ್‍ಐ ವಿಜಯಕುಮಾರ ಭಾವಗಿ ಹಾಗೂ ಸಿಬ್ಬಂದಿಗಳು ಪರಿಸೀಲನೆ ನಡೆಸಿದ್ದಾರೆ.
ಮೃತ ದೇಹ ಯಾರದ್ದು? ಯಾವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ? ಕೊಲೆ ಆರೋಪಿಗಳು ಯಾರು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಲಿದೆ. ಘಟನೆಯಿಂದ ನಾಲವಾರ ಹಾಗೂ ಸಂಕನೂರ ಗ್ರಾಮಸ್ಥರಲ್ಲಿ ಆತಂಕ ಮಡುಗಟ್ಟಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…