ಜೂನ್ 22 ರವರೆಗೆ ಮೋತಕಪಲ್ಲಿಯ ಶ್ರೀ ಬಲಭೀಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿಷೇಧ

0
32

ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-19) ಹರಡವಿಕೆಯನ್ನು ತಡೆಗಟ್ಟಲು ಹಾಗೂ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳ ಮತ್ತು ದೇವಾಲಯದ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಸೇಡಂ ತಾಲೂಕಿನ ಮೋತಕಪಲ್ಲಿಯ ಶ್ರೀ ಬಲಭೀಮ ದೇವಸ್ಥಾನದಲ್ಲಿ 2020ರ ಜೂನ್ 22ರವರೆಗೆ ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶರತ್ ಬಿ. ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

Contact Your\'s Advertisement; 9902492681

2020ರ ಜೂನ್ 22 ರಂದು ಅಮಾವಾಸ್ಯೆ ಇರುವ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಈ ದೇವಸ್ಥಾನಕ್ಕೆ ಆಗಮಿಸುವರು. ಅದೇ ರೀತಿ ಕರ್ನಾಟಕ ರಾಜ್ಯ ಸೇರಿದಂತೆ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಾಲಯಕ್ಕೆ ಆಗಮಿಸುವರು. ಇದಲ್ಲದೇ ಈ ದೇವಸ್ಥಾನದ ಅಕ್ಕಪಕ್ಕದ ಗ್ರಾಮಗಳಲ್ಲಿ ಒಟ್ಟು 19 ಕೋರೋನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿ ದಾಖಲಾಗಿರುತ್ತದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯ ಸಂಹಿತೆ 1973 ರ ಕಲಂ 144 ರನ್ವಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here