ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

0
36

ಕಲಬುರಗಿ:  ೨೦೧೮-೧೯ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಮೆಟ್ರಿಕ್ ನಂತರ ಕೋರ್ಸ್‌ಗಳಲ್ಲಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಳಂದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. ೬೦ ರಿಂದ ೭೪.೯೯ ರಷ್ಟು ಅಂಕಗಳಿಸಿದವರಿಗೆ ೭೦೦೦ರೂ. ಹಾಗೂ ಶೇಕಡ ೭೫ಕ್ಕಿಂತ ಹೆಚ್ಚಿನ ಅಂಕಗಳಿಸಿದವರಿಗೆ ೧೫,೦೦೦ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಅದೇ ರೀತಿ ದ್ವಿತೀಯ ಪಿ.ಯು.ಸಿ ಹಾಗೂ ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ಪಾಸಾದವರಿಗೆ ೨೦,೦೦೦ ರೂ., ಪದವಿ ಪಾಸಾದವರಿಗೆ ೨೫,೦೦೦ರೂ., ಯಾವುದೇ ಸ್ನಾತಕೋತ್ತರ ಪದವಿ  ಪಾಸಾದವರಿಗೆ (ಎಂ.ಎ., ಎಂ.ಎಸ್.ಸಿ., ಎಂ.ಕಾಂ., ಎಂ.ಬಿ.ಎ., ಎಂ.ಎಸ್.ಸಿ., ಎಂ.ಎಫ್.ಎ. ಮತ್ತಿತರ) ೩೦,೦೦೦ರೂ ಹಾಗೂ ಆಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರ್‌ನರಿ, ಮೆಡಿಕಲ್ ಪಾಸಾದವರಿಗೆ ೩೫,೦೦೦ ರೂ.ಗಳ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು.

Contact Your\'s Advertisement; 9902492681

ಪ್ರೋತ್ಸಾಹಧನಕ್ಕಾಗಿ ವಿದ್ಯಾರ್ಥಿಗಳು ಇಲಾಖೆಯ www.sw.kar.nic.in ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಳಂದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ ೦೮೪೭೭-೨೦೩೩೨೨ಗೆ ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ: ೨೦೧೮-೧೯ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಇಲಾಖೆಯ www.sw.kar.nic.in ವೆಬ್‌ಸೈಟ್‌ನಲ್ಲಿ   ಆನ್‌ಲೈನ್ ಮೂಲಕ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ ಕಾರ್ಡ, ಎಲ್ಲ ಸೆಮಿಸ್ಟರ್‌ಗಳ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಿ ಆನ್‌ಲೈನ್ ಅರ್ಜಿ ಪ್ರತಿಯನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಚಾರ್ಯರಿಂದ ಎಲ್ಲ ದಾಖಲೆಗಳನ್ನು ದೃಢೀಕರಿಸಿ ಅರ್ಜಿಯನ್ನು ಕಲಬುರಗಿ ಮಿನಿ ವಿಧಾನಸೌಧ ಎದುರಿಗೆಯಿರುವ ಐವಾನ ಶಾಹಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಎರಡನೇ ಮಹಡಿಯಲ್ಲಿ ಸಲ್ಲಿಸಬೇಕು.   ಕೋರ್ಸಿನ ಹೆಸರು, ಪ್ರೋತ್ಸಾಹಧನದ ಮೊತ್ತ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ  ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here