ಶಹಾಪುರ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಭಾರತೀಯ ಜನತಾ ಪಕ್ಷದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಯ ಕುರಿತು ತಾಲ್ಲೂಕಿನ ಹುಲಕಲ್ ಗ್ರಾಮದಲ್ಲಿ ಮನೆ ಮನೆಗೆ ಸಂಪರ್ಕ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸರಕಾರದ ಕಾರ್ಯವೈಖರಿಗಳ ಜೊತೆಗೆ ಕರಪತ್ರಗಳನ್ನು ಬಿಜೆಪಿ ಗ್ರಾಮ ಮಂಡಲ ಅಧ್ಯಕ್ಷರಾದ ರಾಜುಗೌಡ ಉಕ್ಕಿನಾಳ ಜನರಿಗೆ ಹಂಚಿದರು.
ಕೇಂದ್ರ ಹಾಗೂ ರಾಜ್ಯ ಸರಕಾರದ ಜಾರಿಗೆ ತಂದಿರುವ ಪ್ರತಿಯೊಂದು ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ಸಿಗುವಂತೆ ಮಾಡಿದ್ದು ನರೇಂದ್ರ ಮೋದಿಯವರೇ ಎಂದು ಈ ಸಂದರ್ಭದಲ್ಲಿ ಹೇಳಿದರು.ಮೋದಿಜಿಯವರು ಬಡವರಿಗೆ,ದೀನ ದಲಿತರಿಗೆ ಹಲವಾರು ಯೋಜನೆಗಳು ತಂದಿದ್ದಾರೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇಂದಿನಿಂದ ಆರಂಭಗೊಂಡ ಈ ಅಭಿಯಾನವು ಇದೇ ತಿಂಗಳು 15 ರವರೆಗೂ ಜಾರಿಯಲ್ಲಿರುತ್ತದೆ, ಈ ಕಾರ್ಯಕ್ರಮಗಳಲ್ಲಿ ಶಾಸಕರು, ಸಂಸದರು,ಬಿಜೆಪಿಯ ಪದಾಧಿಕಾರಿಗಳು ಕಾರ್ಯಕರ್ತರು ಇದರಲ್ಲಿ ಭಾಗವಹಿಸಿ ನರೇಂದ್ರ ಮೋದಿಯವರು ಬರೆದಿರುವ ಪತ್ರವನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಾರೆ ಎಂದು ಹೇಳಿದರು ಈ ಸಂದರ್ಭದಲ್ಲಿ ಭೀಮರೆಡ್ಡಿ ಹುಲಿಕಲ್, ಶಾಂತಗೌಡ ದಿಗ್ಗಿ, ಯಲ್ಲಪ್ಪ ನಾಯಕ್, ಭೀಮಣ್ಣ ಜೊತೆಗೆ ಪಕ್ಷದ ಕಾರ್ಯಕರ್ತರು ಹಾಗೂ ಇತರರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…