ಬಿಸಿ ಬಿಸಿ ಸುದ್ದಿ

ಸರ್ಕಾರಿ ನೌಕರರು ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಲು ಸೂಚನೆ

ಕಲಬುರಗಿ: ಕೆಲವು ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಇನ್ನಿತರ ಅಧಿಕಾರಿ ಮತ್ತು ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರ ಸರ್ಕಾರಿ ಸೇವೆಗಳನ್ನು ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಜಿಲ್ಲೆಯಲ್ಲಿ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಸೇರಿದಂತೆ ಮತ್ತಿತರ ಅಧಿಕಾರಿ ಹಾಗೂ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ 2020ರ ಜೂನ್ 10 ರಿಂದ ಒಂದು ತಿಂಗಳೊಳಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.


.
ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ ಕುಟುಂಬ ಸದಸ್ಯರು ಈಗಾಗಲೇ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹೊಂದಿದ್ದಲ್ಲಿ ಒಂದು ತಿಂಗಳೊಳಗಾಗಿ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಒಂದು ತಿಂಗಳೊಳಗಾಗಿ ಹಿಂದಿರುಗಿಸಬೇಕೆಂದು ಸರ್ಕಾರವು ದಿನಾಂಕ: 10-06-2020 ರಂದು ಸುತ್ತೋಲೆ ಹೊರಡಿಸಿದೆ. ಒಂದು ವೇಳೆ, ಒಂದು ತಿಂಗಳ ನಂತರವೂ ಈ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾಗಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ. ಇದಲ್ಲದೇ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಸಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ ಹಾಗೂ ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿದೆ. ಸರ್ಕಾರಿ ಅಧಿಕಾರಿ/ ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನ ರೇಖೆಗಿಂತ ಕೆಳಗೆ ಬರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago