ಶಹಾಬಾದ: ನಗರಸಭೆಯ ನೂತನ ಪೌರಾಯುಕ್ತರಾಗಿ ಕೆ.ಗುರಲಿಂಗಪ್ಪ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದಿನ ಪೌರಾಯುಕ್ತರಾದ ವೆಂಕಟೇಶ ಅವರು ತಮ್ಮ ಅಧಿಕಾರವನ್ನು ಕೆ.ಗುರಲಿಂಗಪ್ಪನವರಿಗೆ ಹಸ್ತಾಂತರಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ, ನಗರದ ಮುಖಂಡರ ಜತೆ ಚರ್ಚಿಸಿ ಅಭಿವೃದ್ಧಿ ಬಗ್ಗೆ ಯೋಜನೆ ಹಾಕಿಕೊಳ್ಳಲಾಗುವುದು. ನಗರಸಭೆಯ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡಗಳಲ್ಲಿ ಕುಡಿಯುವ ನೀರಿನ ಉತ್ತಮ ವ್ಯವಸ್ಥೆ ನೀಡಲಾಗುವುದು. ಕೊರೊನಾ ಕಂಟಕವಾಗಿ ಕಾಡುತ್ತಿರುವುದರಿಂದ ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಈ ಹಿಂದೆ 2013-2016ರವರೆಗೆ ಶಹಾನಾದ ನಗರಸಭೆಯಲ್ಲಿಯೇ ಕಾರ್ಯನಿರ್ವಹಿಸಿದ್ದೆನೆ. ಇಲ್ಲಿನ ಸ್ಥಿತಿಗತಿಗಳ ಬಗ್ಗೆ ನನಗೆ ಅರಿವಿದ್ದು, ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೆನೆ ಎಂದರು.
ನಗರಸಭೆಯ ಕಛೇರಿಯ ಸಿಬ್ಬಂದಿ ವರ್ಗದವರು ವರ್ಗಾವಣೆಗೊಂಡ ಪೌರಾಯುಕ್ತ ವೆಂಕಟೇಶ ಅವರಿಗೆ ಬೀಳ್ಕೊಡಲಾಯಿತು. ನೂತನ ಪೌರಾಯುಕ್ತರಿಗೆ ಸ್ವಾಗತಿಸಿ, ಸನ್ಮಾನಿಸಲಾಯಿತು.
ಸಮುದಾಯ ಸಂಘಟನಾ ಅಧಿಕಾರಿ ರಘುನಾಥ ನರಸಾಳೆ, ಸಾಬಣ್ಣ ಸುಂಗಲಕರ್ ಇತರ ಸಿಬ್ಬಂದಿ ವರ್ಗವದರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…