ಸುರಪುರ: ದೇಶದ ಮಾಜಿ ಪ್ರಧಾನಿಗಳಾದ ದೇವೆಗೌಡ ಅವರು ರಾಜ್ಯಸಭಾ ಸದಸ್ಯರಾಗಿ ನೇಮಕಗೊಳ್ಳುವ ಮೂಲಕ ದೇಶದ ಅಭಿವೃಧ್ಧಿಯ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲು ಅನುಕೂಲಾಗಿದೆ ಎಂದು ಜಾತ್ಯಾತೀತ ಜನತಾ ದಳ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ್ ಹರ್ಷ ವ್ಯಕ್ತಪಡಿಸಿದರು.
ನಗರದ ಜೆಡಿಎಸ್ ಕಚೇರಿ ಉಸ್ತಾದ್ ಮಂಜಿಲ್‌ನಲ್ಲಿ ಹರ್ಷಾಚರಣೆ ಕಾರ್ಯಕ್ರಮ ನಡೆಸಿ ಮಾತನಾಡಿ,ದೇವೆಗೌಡ ಅವರು ಪ್ರಧಾನಿಗಳಾಗಿ ಈ ದೇಶದ ರೈತರಿಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ.ಅಲ್ಲದೆ ನಮ್ಮ ಕರ್ನಾಟಕಕ್ಕೂ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.ಇಂದು ಅವರು ಮತ್ತೆ ರಾಜ್ಯಸಭಾ ಸದಸ್ಯರಾಗಿ ಸಂಸತ್ತು ಪ್ರವೇಶ ಮಾಡಿರುವುದು ಹರ್ಷ ಮೂಡಿಸಿದೆ,ಈ ಸಭೆಯ ಮೂಲಕ ದೇವೆಗೌಡರಿಗೆ ಶುಭ ಕೋರುತ್ತಾ ಅಭಿನಂಧನೆ ಸಲ್ಲಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ತಿಪ್ಪಣ್ಣ ಪೊಲೀಸ್ ಪಾಟೀಲ್,ಶೌಕತ್ ಅಲಿ,ಅಲ್ತಾಫ್ ಮಹಿಬೂಬ್,ಶಿವಪ್ಪ ಸದಬ್,ರಾಮಚಂದ್ರ ನಾಯ್ಕ ಕೊಡೇಕಲ್,ಭೀಮನಗೌಡ ಹೆಬ್ಬಾಳ,ಬಸವರಾಜ ಕಲ್ಲದೇವನಹಳ್ಳಿ,ರಂಗಣ್ಣ ದೊರೆ,ವಿನಾಯಕ ಬಳಿಚಕ್ರ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…