ಸುರಪುರ: ನಗರದ ಟೈಲರ್ ಮಂಜಿಲ್‌ನಲ್ಲಿ ಕರ್ನಾಟಕ ಕಾರ್ಮಿಕರ ಹಿತ ರಕ್ಷಣಾ ಸಂಘದ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ದೇವೆಂದ್ರ ತಳವಾರ ಭಾಗವಹಿಸಿ ಮಾತನಾಡಿ,ಇಂದು ರಾಜ್ಯದಲ್ಲಿ ಕಾರ್ಮಿಕರ ಸಮಸ್ಯೆಗಳು ತಾಂಡವವಾಡುತ್ತಿವೆ.ಸರಕಾರಗಳು ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸಿವೆ,ಇದರಿಂದ ಇಂದು ಕಾರ್ಮಿಕರು ಒಂದೊತ್ತಿನ ಊಟಕ್ಕೂ ಸಂಕಟ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಕಾರ್ಮಿಕರ ಹಕ್ಕುಗಳನ್ನು ಪಡೆದುಕೊಳ್ಳಲು ಎಲ್ಲಾ ಕಾರ್ಮಿಕರಲ್ಲಿ ಒಗ್ಗಟ್ಟು ಹಾಗು ಹೋರಾಟದ ಅವಶ್ಯವಿದೆ ಎಂದರು.
ಇಂದು ನಮ್ಮ ಸಂಘಟನೆ ಬಲ ಪಡಿಸುವ ಉದ್ದೇಶದಿಂದ ನಾಡಿನೆಲ್ಲೆಡೆ ಸಂಚರಿಸಿ ಸಂಘಟನೆ ಕಟ್ಟಲಾಗುತ್ತಿದೆ. ಅದರಂತೆ ಸುರಪುರ ತಾಲೂಕಿನಲ್ಲಿಯೂ ಎಲ್ಲಾ ಕಾರ್ಮಿಕರನ್ನು ಸಂಘಟನೆಯಡಿ ಬರಮಾಡಿಕೊಂಡು ಉತ್ತಮವಾದ ಸಂಘಟನೆ ಕಟ್ಟಿ ಬಲ ಪಡಿಸುವಂತೆ ಕಿವಿಮಾತು ಹೇಳಿದರು.ಇದೇ ಸಂದರ್ಭದಲ್ಲಿ ಸಂಘದ ತಾಲೂಕು ಸಂ ಕಾರ್ಯದರ್ಶಿಯನ್ನಾಗಿ ಮಹಾದೇವ ಬೊನ್ಹಾಳ ಅವರನ್ನು ನೇಮಕಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಬಾಗೇಶ ಏವೂರ,ಆನಂದ ಹೊಸಗೌಡರ್,ಪ್ರಶಾಂತ ಜೈನಾಪುರ,ಶರಣು ದೇವರಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…