ಶಹಾಬಾದ: ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯನ್ನು ಬಂಧಿಸಬೇಕೆಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ರಾಜೇಶ ಯನಗುಂಟಿಕರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧಿಸಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿ ಎರಡು ಮೂರು ದಿನಗಳಾದರೂ ರಾಜ್ಯ ಸರ್ಕಾರ ಆ ವ್ಯಕ್ತಿಯನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ.
ಒಬ್ಬರು ಕೇಂದ್ರದ ಮಾಜಿ ಸಚಿವರು, ಅವರ ಮಗ ಹಾಲಿ ಶಾಸಕರಾಗಿದ್ದಾರೆ.ಇಂತಹ ಜನಪ್ರತಿನಿಧಿಗಳ ಮೇಲೆ ಜೀವ ಬೆದರಿಕೆ ಹಾಕಿದರೂ ಇಲ್ಲಿಯವರಿಗೆ ಆ ವ್ಯಕ್ತಿಯನ್ನು ಬಂಧಿಸುವಲ್ಲಿ ಹಿಂದೇಟು ಹಾಕುವುದಾದರೆ, ಜನಸಾಮನ್ಯರ ಗತಿಯೇನು. ಕೂಡಲೇ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲೇಬೇಕು.ಇಲ್ಲದಿದ್ದರೇ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ರಾಜೇಶ ಎಚ್ಚರಿಕೆ ನೀಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…