ಕಲಬುರಗಿ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದು ಕೇವಲ ಊಹಾಪೋಹ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಸಚಿವರು ಯಾದಗಿರಿಯಿಂದ ಕಲಬುರಗಿಗೆ ಆಗಮಿಸಿ ಇಲ್ಲಿನ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಈ ವೇಳೆ ಸ್ಪಷ್ಟಪಡಿಸಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಯಡಿಯೂರಪ್ಪ ಜೊತೆ ಮಾತಾಡಲಿದ್ದಾರೆ. ಇದೇ ಕಾರಣಕ್ಕೆ ಮತ್ತೆ ಲಾಕ್ ಡೌನ್ ಅನ್ನೋ ಊಹಾಪೋಹ ಅಷ್ಟೇ ಎಂದು ತಿಳಿಸಿದ್ದಾರೆ.
ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ, ಆರೋಗ ಲಕ್ಷಣ ಇಲ್ಲದವರಿಂದ ರೋಗ ಹರಡುವ ಸಾಧ್ಯತೆ ಕಡಿಮೆ ಇದೇ ಎಂದು ಡಬ್ಲೂಹೆಚ್ಓ ಸ್ಪಷ್ಟಪಡಿಸಿದ್ದು, ಅನುಭವಕ್ಕೂ ಬಂದಿದೆ ಎಂದರು.