ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಲಹೆಗಾರರನ್ನಾಗಿ ನೇಮಕ್ಕೆ ಮಠಪತಿ ಒತ್ತಾಯ

ಕಲಬುರಗಿ: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಂಸ್ಕೃತಿಕ ಸಂಘಕ್ಕೆ ಆಡಳಿತಾತ್ಮಕ ಸಲಹೆಗಾರರನ್ನಾಗಿ ಕಲ್ಯಾಣ ಕರ್ನಾಟಕ ಭಾಗದವರನ್ನು ಬಿಟ್ಟು ಅನ್ಯ ಪ್ರದೇಶದವರನ್ನು ನೇಮಿಸಿಕೊಳ್ಳಲು ಮುಂದಾಗಿರುವುದು ಖಂಡನೀಯವಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ಕೈಬಿಟ್ಟು ಕಲ್ಯಾಣ ಕರ್ನಾಟಕ ಭಾಗದವರನ್ನೇ ಆಡಳಿತಾತ್ಮಕ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವಂತೆ ಹೋರಾಟಗಾರ ನಾಗಲಿಂಗಯ್ಯ ಮಠಪತಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಅವರು ಕಲ್ಯಾಣ ಕರ್ನಾಟಕದ ಸಮಸ್ಯೆ, ಸವಾಲುಗಳು, ಬದುಕು ಬವಣೆ ಅರಿಯದವರನ್ನು ಯಾವ ಕಾರಣಕ್ಕಾಗಿ ನೇಮಿಸಿಕೊಳ್ಳಲು ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ ಸೇಡಂ ರವರು ಮುಂದಾಗಿದ್ದಾರೆ, ಇದು ಸಮಂಜಸವಾದ ನಿರ್ಧಾರವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಅನೇಕ ಜನ ಮಹನೀಯರು ಹಗಲಿರುಳು ದುಡಿದಿದ್ದಾರೆ. ಸಂವಿಧಾನದ ೩೭೧ ನೇ ಕಲಂ ತಿದ್ದುಪಡಿಗಾಗಿ ಹೋರಾಟ ಮಾಡಿದ್ದಾರೆ. ಅನೇಕ ಪ್ರಕರಣಗಳನ್ನು ಮೈಮೇಲೆ ಹಾಕಿಕೊಂಡು ನಿರಂತರವಾಗಿ ಧ್ವನಿ ಎತ್ತಿದ್ದಾರೆ.

ಈಗಾಗಲೇ ಈ ಭಾಗಕ್ಕೆ ಅನ್ಯಾಯವಾಗುತ್ತಿರುವುದನ್ನು ಮನಗಂಡು ಅಸಮಾನತೆ ನಿವಾರಿಸಿ ಸಮಗ್ರ ಅಭಿವೃದ್ಧಿಯ ಆಶಯದಿಂದ ಸರ್ಕಾರ ಸಂಘ ಸ್ಥಾಪಿಸಿದ್ದು ಸಂಘದ ಸಲಹೆಗಾರರ ನೇಮಕಾತಿಯಲ್ಲಿಯೂ ಸಹ ಅನ್ಯಾಯವಾಗುತ್ತಿರುವುದು ಆಶ್ಚರ್ಯವಾಗಿದ್ದು ಇಂತಹ ಸಂದರ್ಭದಲ್ಲಿ ಸ್ಥಳೀಯ ತಜ್ಞರನ್ನು ದೂರ ಸರಿಸಿ ಅನ್ಯರಿಗೆ ಮಣೆ ಹಾಕುತ್ತಿರುವ ಹಿಂದಿರುವ ಉದ್ದೇಶವೇನೆಂದು ಪ್ರಶ್ನಿಸಿರುವ ಅವರು ನಮ್ಮ ಭಾಗದಲ್ಲೇ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದ ವಿವಿಧ ಕ್ಷೇತ್ರಗಳ ಸಾಧಕರು ಮತ್ತು ತಜ್ಞರಿದ್ದಾರೆ. ಬೇಕಾದರೆ ಸೇಡಂ ರವರು ಅವರ ಸಂಸ್ಥೆಗಳಿಗೆ ಅನ್ಯ ಪ್ರದೇಶದವರನ್ನು ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಿ.

ಅದನ್ನು ಬಿಟ್ಟು ಸರಕಾರದ ಸಂಸ್ಥೆಗೆ ಅನ್ಯ ಭಾಗದವರನ್ನು ನೇಮಕ ಮಾಡುವುದಕ್ಕೆ ತಮ್ಮ ವಿರೋಧವಿದ್ದು ಸ್ಥಳೀಯರನ್ನೇ ನೇಮಕ ಮಾಡಿಕೊಳ್ಳುವಂತೆ ಅವರಲ್ಲಿ ಕೋರಲಾಗುವುದು. ಒಂದು ವೇಳೆ ಇದನ್ನು ಮೀರಿಯೂ ಅನ್ಯ ಪ್ರದೇಶದವರನ್ನೇ ನೇಮಕ ಮಾಡಿಕೊಂಡರೆ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago