ಸುರಪುರ: ತಾಲೂಕಿನ ಅನೇಕ ಗ್ರಾಮ ಪಂಚಾಯತಿಗಳಲ್ಲಿ ನಡೆಸಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳನ್ನು ಕಾರ್ಮಿಕರಿಂದ ನಿರ್ಮಿಸದೆ ಯಂತ್ರಗಳನ್ನು ಬಳಸಿ ನಿರ್ಮಿಸುವ ಮೂಲಕ ಅಕ್ರಮ ನಡೆಸಲಾಗುತ್ತಿದೆ ಎಂದು ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು,ಇಂದು ಕೋವಿಡ್-೧೯ ಕೊರೊನಾ ವೈರಸ್ ಕಾರಣದಿಂದ ಬೆಂಗಳೂರು ಗೋವಾ ಮಹಾರಾಷ್ಟ್ರ ರಾಜ್ಯಗಳಿಗೆ ಗುಳೆ ಹೋದ ಜನರು ಇಂದು ಎಲ್ಲರು ತಮ್ಮ ಊರುಗಳಿಗೆ ವಾಪಸ್ ಬಂದಿದ್ದು ಅವರೆಲ್ಲರಿಗೂ ಕೆಲಸ ಕೊಟ್ಟು ಜೀವನಕ್ಕೆ ಆಸರೆಯಾಗಬೇಕಿದ್ದ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸಿ ಕಾರ್ಮಿಕರಿಗೆ ಕೆಲಸವಿಲ್ಲದೆ ವಂಚಿಸಲಾಗುತ್ತಿದೆ.ಅಲ್ಲದೆ ಕೆಲ ಗ್ರಾಮ ಪಂಚಾಯತಿಗಳಲ್ಲಿ ಕಾಮಗಾರಿಗಳನ್ನು ನಡೆಸದೆ ಹಣ ಲಪಟಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನು ಕೂಡಲೆ ಜಿಲ್ಲಾ ಪಂಚಾಯತಿ ಸಿಇಒ ಅವರು ಮತ್ತು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೂಡಲೆ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಡೆದಿರುವ ಉದ್ಯೋಗ ಖಾತ್ರಿ ಯೋಜನೆಯಡಿಯ ಕಾಮಗಾರಿಗಳನ್ನು ತನಿಖೆಗೊಳಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಸಂಘಟನೆಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…