ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷ ಪೂರ್ಣಗೊಂಡಿರುವ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ‘ಸಮರ್ಥ ನಾಯಕತ್ವ ಸ್ವಾವಲಂಬಿ ಭಾರತ ಅಭಿಯಾನ’ದ ಕುರಿತು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ದೆಹಲಿಯಿಂದ ರಾಜ್ಯದ ಜನತೆಯನ್ನುದ್ದೇಶಿಸಿ ಮಾಡಿದ ಭಾಷಣವನ್ನು ಬೃಹತ್, ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರು ವರ್ಚುಯಲ್ ರ್ಯಾಲಿಯಲ್ಲಿ ಭಾಗವಹಿಸಿ ವೀಕ್ಷಿಸಿದರು.