ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಎರಡನೇ ಅವಧಿಯ ಮೊದಲ ವರ್ಷ ಪೂರ್ಣಗೊಂಡಿರುವ ಸಂಧರ್ಭದಲ್ಲಿ ಭಾರತೀಯ ಜನತಾ ಪಕ್ಷ ಆಯೋಜಿಸಿದ್ದ ಸಮರ್ಥ ನಾಯಕತ್ವ ಸ್ವಾವಲಂಬಿ ಭಾರತ ಅಭಿಯಾನದ ಕರ್ನಾಟಕ ಜನ ಸಂವಾದ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿದೆ ಎಂದು ಮಾನ್ಯ ಬೃಹತ್, ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ ಶೆಟ್ಟರ್ ಅವರು ಹೇಳಿದರು.
ನಗರದಲ್ಲಿಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ರವರ ವರ್ಚುಯಲ್ ರ್ಯಾಲಿಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ಕರೋನಾ ಸಂಕಷ್ಟ ಕಾಲದಲ್ಲಿ ಜನರನ್ನು ಯಶಸ್ವಿಯಾಗಿ ತಲುಪಲು ಆಯೋಜಿಸಿದ್ದ ಈ ಜನ ಸಂವಾದ ಕಾರ್ಯಕ್ರಮ ತನ್ನ ಗುರಿಯನ್ನು ತಲುಪಿದೆ. ಬಿಜೆಪಿ ಕಾರ್ಯಾಲಯಗಳು, ಮನೆ ಮನೆಗಳು ಹಾಗೂ ತಮ್ಮ ಮೊಬೈಲ್ಗಳ ಮೂಲಕ ಈ ರ್ಯಾಲಿಯಲ್ಲಿ ಭಾಗವಹಿಸಿದ ಕೋಟ್ಯಾಂತರ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 6 ವರ್ಷಗಳಲ್ಲಿ ಅದರಲ್ಲೂ ವಿಶೇಷವಾಗಿ ತಮ್ಮ ಎರಡನೇ ಅವಧಿಯ ಮೊದಲ ವರ್ಷ ದ ಸಾಧನೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋಟ್ಯಾಂತರ ಕಾರ್ಯಕರ್ತರನ್ನು ತಲುಪುವುದು ಸುಲಭ ಕಾರ್ಯವನ್ನು. ಇಂತಹ ಹೊಸತನಗಳಿಗೆ ಯಾವಾಗಲೂ ಸಿದ್ದವಾಗಿರುವ ಭಾರತೀಯ ಜನತಾ ಪಕ್ಷ ಹೊಸದೊಂದು ಗುರಿಯನ್ನು ತಲುಪಿದೆ ಎಂದು ಹೇಳಿದರು.
ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾರವರು ತಮ್ಮ ಭಾಷಣದಲ್ಲಿ ತಿಳಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಳೆದ 6 ವರ್ಷಗಳಲ್ಲಿ 6 ದಶಕಗಳಿಂದ ಬಾಕಿ ಇದ್ದ ಕಾರ್ಯಗಳನ್ನು ಮಾಡುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ, ವಿಶ್ವದಲ್ಲೇ ಅತ್ಯಂತ ಪರಿಣಾಕಾರಿಯಾಗಿ ಕರೋನಾ ಮಹಾಮಾರಿಯನ್ನು ನಿಯಂತ್ರಿಸಿದೆ. ಬಹಳಷ್ಟು ಸ್ವಲ್ಪ ಸಮಯದಲ್ಲಿ ದೇಶ ಈ ಮಹಾಮಾರಿಯನ್ನು ಸಮರ್ಪಕವಾಗಿ ನಿಯಂತ್ರಿಸುವಲ್ಲಿ ಮಾಡುವಲ್ಲಿ ಪ್ರಧಾನಿಗಳ ಕೊಡುಗೆ ಬಹಳಷ್ಟಿದೆ ಎಂದು ಹೇಳಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…