ಕಲಬುರಗಿ: ಕೊರೋನಾ ನಿರ್ವಹಣೆ,ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮ ಸೇರಿದಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪನವರ ಸರ್ಕಾರದ ವಿವಿಧ ನಿರ್ಧಾರಗಳನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಮುಕ್ತ ಕಂಠದಿಂದ ಶ್ಲಾಘಿಸಿರುವುದು ಮುಖ್ಯಮಂತ್ರಿಗಳ ಜನಪ್ರಿಯ ಆಡಳಿತಕ್ಕೆ ಹಿಡಿದ ಕನ್ನಡಿ ಯಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಜನಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ನಡ್ಡಾ ರವರು ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳು, ನಿಯಂತ್ರಣದಲ್ಲಿರುವುದಕ್ಕೆ ಯಡಿಯುರಪ್ಪನವರ ನೇತೃತ್ವದ ಸರ್ಕಾರ ಹಾಗೂ ಅವರ ತಂಡ ಬಹಳ ಉತ್ಸಾಹದಿಂದ ಮತ್ತು ಉತ್ತಮ ಕೆಲಸ ಮಾಡಿರುವುದೆ ಕಾರಣ. ಅಲ್ಲದೆ ಟ್ರೇಸ್,ಟೆಸ್ಟ್ ಟ್ರ್ಯಾಕ್ ಮತ್ತು ಟ್ರೀಟ್ ಮೆಂಟ್ ತಂತ್ರವನ್ನು ಕರ್ನಾಟಕದಲ್ಲಿ ಪ್ರಖರವಾಗಿ ಮಾಡಿರುವುದು ಅತ್ಯುತ್ತಮ ಎಂದು ಶ್ಲಾಘಿಸಿದರು.
ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಎರಡನೇ ಸ್ಥಾನ ಪಡೆದಿರುವುದು ಅಮೋಘ ಸಾಧನೆಯಾಗಿದೆ ಎಂದು ಜೆ ಪಿ ನಡ್ಡಾ ಮುಕ್ತಕಂಠದಿಂದ ಹೋಗಳಿರುವುದು ಕೂಡ ಮುಖ್ಯಮಂತ್ರಿ ಯಡಿಯುರಪ್ಪನವರ ನೇತೃತ್ವದ ಸರ್ಕಾರಕ್ಕೆ ಹಾಗೂ ಕೊರೊನಾ ನಿಯಮಾವಳಿಗಳನ್ನು ಅಚ್ಚುಕಟ್ಟಾಗಿ ಪಾಲಿಸಿದ ಕರ್ನಾಟಕದ ಜನತೆಗೆ ಸಂದ ಗೌರವವಾಗಿದೆ ಎಂದು ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…