ಕಲಬುರಗಿ: ಚಿತ್ತಾಪುರ ತಾಲೂಕಿನ 13 ಜನ ಸೇರಿದಂತೆ ಜಿಲ್ಲೆಯ ಒಟ್ಟು 32 ಜನ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಸೋಮವಾರ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ಚಿಂಚೋಳಿ ತಾಲೂಕಿನ 5, ಕಾಳಗಿ ತಾಲೂಕಿನ 6, ಚಿತ್ತಾಪುರ ತಾಲೂಕಿನ 13, ಆಳಂದ ತಾಲೂಕಿನ 7 ಹಾಗೂ ಶಹಾಬಾದ್ ತಾಲೂಕಿನ ಓರ್ವ ವ್ಯಕ್ತಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತ 944 ಜನರಲ್ಲಿ 459 ಜನ ಗುಣಮುಖರಾಗಿದ್ದಾರೆ. ಉಳಿದಂತೆ 475 ಸಕ್ರಿಯ ರೋಗಿಗಳಿದ್ದಾರೆ ಎಂದು ಡಿ.ಸಿ. ಶರತ್ ಬಿ. ವಿವರಿಸಿದರು.