ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ನಿರ್ದೇಶಕರನ್ನಾಗಿ ಕಲ್ಯಾಣ ಕರ್ನಾಟಕ ಭಾಗದಿಂದ ಆಯ್ಕೆ: ರಾಘವೇಂದ್ರ ಕುಲಕರ್ಣಿ

0
413

ಕಲಬುರಗಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ಈಗಾಗಲೇ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚಿಸಲಾಗಿದೆ. ಇನ್ನೂ ಎರಡು ದಿನಗಳಲ್ಲಿ ಮಂಡಳಿಗೆ ಕಲ್ಯಾಣ ಕರ್ನಾಟಕ ಭಾಗದಿಂದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿ,  ಸಿಎಂ ಕಾರ್ಯಾಲಯ ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಕೋಗನೂರ ಹೇಳಿದ್ದಾರೆ.

Contact Your\'s Advertisement; 9902492681

ಕಲ್ಯಾಣ ಕರ್ನಾಟಕದ ಭಾಗದ ಸಮಾಜ ಬಾಂಧವರ ಕೋರಿಕೆಯಂತೆ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ ಹಾಗೂ ಮುಜರಾಯಿ ಸಚಿವರಾದ ಶ್ರೀನಿವಾಸ ಪೂಜಾರಿಯವರ ಅವರ ಜೊತೆಗೆ ನಿನ್ನೆ ಚರ್ಚಿಸಲಾಗಿದ್ದು , ನಮ್ಮ ಭಾಗದ ಮನವಿಗೆ ಸ್ಪಂದಿಸಿದ ಅಧ್ಯಕ್ಷರು ಪರಿಷ್ಕೃತ ಪಟ್ಟಿ ಮಾಡುವುದಾಗಿ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಮಾಜದ ಬಾಂಧವರಿಗೆ ನಿರ್ದೇಶಕ ಮಂಡಳಿಯಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.

ಅದಕ್ಕಾಗಿ ಸಮಾಜದ ಬಾಂಧವರು ಪ್ರಮುಖವಾಗಿ ಕಲ್ಯಾಣ ಕರ್ನಾಟಕ ಭಾಗದವರು ಯಾವುದೇ ಆತುರದ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ ಕೋಗನೂರ ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here