ಶಹಾಪುರ: ಗ್ರಾಮೀಣ ಭಾಗದ ಪಂಚಾಯಿತಿ ವ್ಯಾಪ್ತಿಗೆ ಬರುವ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಗೆ ತರುವಂತೆ ಒತ್ತಾಯಿಸಿ ತಾಲ್ಲೂಕಿನ ಸೈದಾಪುರ ಗ್ರಾಮದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ವಲಸೆ ಕಾರ್ಮಿಕರಿಗೂ ಹಾಗೂ ಸ್ಥಳೀಯ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕು ಜೊತೆಗೆ ಸಾಮಾಜಿಕ ಭದ್ರತೆ ಒದಗಿಸಿಕೊಡಬೇಕು ಎಂದು ಈ ಸಂದರ್ಭದಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಚುರುಕು ಗೊಳಿಸುವುದರಿಂದ ಪೂನಾ, ಮಹಾರಾಷ್ಟ್ರ,ಬೆಂಗಳೂರು ಮುಂತಾದ ನಗರ ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟಬಹುದು ಎಂದು ಹೇಳಿದರು.