ವಾಡಿ: ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ೮ರ ಅಂಬೇಡ್ಕರ್ ಕಾಲೋನಿ, ರಾಮ ಮಂದಿರ ಬಡಾವಣೆ ಹಾಗೂ ಚೌಡೇಶ್ವರ ಕಾಲೋನಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಪಿಡಬ್ಲುಡಿ ಇಲಾಖೆಯಿಂದ ೧.೫ ಕೋಟಿ ರೂ. ಬಿಡುಗಡೆಯಾಗಿದೆ ಎಂದು ಪುರಸಭೆ ಕಾಂಗ್ರೆಸ್ ಸದಸ್ಯೆ ಸುಗಂಧಾ ನಾಗೇಂದ್ರ ಜೈಗಂಗಾ ಹೇಳಿದರು.
ಮಂಗಳವಾರ ತಮ್ಮ ವಾರ್ಡ್‌ನಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಸಿಸಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಡಾವಣೆಯಲ್ಲಿ ಹದಗೆಟ್ಟ ರಸ್ತೆಗಳು ಹಾಗೂ ಚರಂಡಿಗಳಿರುವುದನ್ನು ಗಮನಿಸಿ ಅನುದಾನ ಬಿಡುಗಡೆಗೆ ಕಳೆದ ಎರಡು ವರ್ಷಗಳಿಂದ ಪ್ರಯತ್ನ ಮುಂದು ವರೆದಿತ್ತು. ಪರಿಣಾಮ ವಾರ್ಡ್‌ನಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ೧.೫ ಕೋಟಿ ರೂ. ಅನುದಾನ ಮಂಜೂರಾಗಿದೆ. ಅಲ್ಲದೆ ಬಡಾವಣೆಯಲ್ಲಿ ಶಿಥಿಲಗೊಂಡಿದ್ದ ಕುಡಿಯುವ ನೀರಿನ ಹಳೆಯ ಓವರ್ ಟ್ಯಾಂಕ್ ತೆರವು ಮಾಡಲಾಗಿದ್ದು, ಪುನಹಃ ಹೊಸದಾಗಿ ನೂತನ ಶೈಲಿಯ ಟ್ಯಾಂಕ್ ನಿರ್ಮಿಸಲು ನಕ್ಷೆ ಸಿದ್ಧಗೊಂಡಿದೆ. ಮಕ್ಕಳಿಗಾಗಿ ಉದ್ಯಾನವನ ಅಭಿವೃದ್ಧಿಗೊಳಿಸಲಾಗುವುದು. ಅಲ್ಲದೆ ಶುದ್ಧ ಕುಡಿಯುವ ನೀರಿನ ಆರ್‌ಒ ಪ್ಲ್ಯಾಂಟ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಹಿರಿಯ ಮುಖಂಡ ಟೋಪಣ್ಣ ಕೋಮಟೆ, ಸಂತ ಅಂಬ್ರೂಸ್ ಕಾನ್ವೆಂಟ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ತೆಕಲಾ ಮೇರಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಸಾಲೋಮನ್ ರಾಜಣ್ಣ, ಕೋಲಿ ಸಮಾಜದ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ನಾಗೇಂದ್ರ ಜೈಗಂಗಾ, ದತ್ತು ಜಾಧವ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…