ಸುರಪುರ: ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಒಳ್ಳೆಯ ಅಭಿವೃಧ್ಧಿ ಕಾರ್ಯ ಮಾಡಿದೆ ಎಂದು ಅನೇಕರು ಮಾದ್ಯಮಗಳಲ್ಲಿ ಮಾತನಾಡುತ್ತಿದ್ದಾರೆ.ಆದರೆ ನಿಜಕ್ಕೂ ಮೋದಿಯವರ ಸರಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಿಪಿಎಂ ಮುಖಂಡ ಯಲ್ಲಪ್ಪ ಚಿನ್ನಾಕಾರ ಮಾತನಾಡಿದರು.
ನಗರದ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಸಿಪಿಎಂ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತತ್ವ ವಹಿಸಿ ಮಾತನಾಡಿ,ಇಂದು ಕೊರೊನಾ ಸೊಂಕಿತರ ಸಂಖ್ಯೆ ದೇಶದಲ್ಲಿ ೩ ಲಕ್ಷ ಸಮೀಪಿಸಿದೆ ಆದರೆ ಕೊರೊನಾ ತಡೆಯುವಲ್ಲಿ ಸರಕಾರ ಒಳ್ಳೆ ಕೆಲಸ ಮಾಡಿದೆ ಎಂದು ಹೇಳುತ್ತಾರೆ ಯಾವುದು ಒಳ್ಳೆ ಕೆಲಸ ಎಂದು ಪ್ರಶ್ನಿಸಿದರು.ದೇಶದಲ್ಲಿನ ಲಕ್ಷಾಂತರ ಜನರು ಕೆಲಸವಿಲ್ಲದೆ ನಿತ್ಯವು ಒಂದೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ.ಕೊರೊನಾ ಕಾರಣದಿಂದ ಹತ್ತು ಸಾವಿರದಷ್ಟು ಜನ ಸಾವಿಗೀಡಾಗಿದ್ದಾರೆ.ಸಾವಿರಾರು ಜನ ಕಾರ್ಮಿಕರು ಬೇರೆ ರಾಜ್ಯಗಳಿಂದ ತಮ್ಮ ಊರುಗಳಿಗೆ ನಡೆದುಕೊಂಡು ಹೋಗುವಾಗ ಸಾವನ್ನಪ್ಪಿದ್ದಾರೆ ಇದು ಹೇಗೆ ಅಭೀವೃಧ್ಧಿಯಾಗುತ್ತದೆ? ಇಂದಿಗೂ ಕೊರೊನಾ ಸಂಕಷ್ಟ ಜನರನ್ನು ಕಾಡುತ್ತಿದ್ದು ಬಡ ಜನರು ಒಂದೊತ್ತಿನ ಊಟವಿಲ್ಲದಂತಾಗಿದ್ದಾರೆ ಇದುವಾ ಮೋದಿಯವರ ಅಭಿವೃಧ್ಧಿ ಎಂದು ಖಾರವಾಗಿ ಪ್ರಶ್ನಿಸಿದರು.
ಮದ್ಹ್ಯಾನ ೨ ಗಂಟೆಯ ಸುಮಾರಿಗೆ ಸೇರಿದ ಅನೇಕ ಜನ ಹೋರಾಟಗಾರರು ಕೇಂದ್ರ ಸರಕಾರದ ವಿರುಧ್ಧ ಘೋಷಣೆಗಳನ್ನು ಕೂಗುತ್ತಾ ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ದಾವಲಸಾಬ್ ನದಾಫ್,ರಫೀಕ ಸುರಪುರ,ಸುರೇಖಾ ಕುಲಕರ್ಣಿ,ಧರ್ಮಣ್ಣ ದೊರೆ,ನಸೀಮಾ,ರಾಧಾಬಾಯಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…