ಕಲಬುರಗಿ: ಕೋವಿಡ್-19 ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಮಂಚಿ ಹಾಗೂ ಚಿಂಚೋಳಿ ತಾಲೂಕಿನ ಪಸ್ತಾಪುರ ಗ್ರಾಮಗಳಲ್ಲಿನ ವ್ಯಕ್ತಿಗಳನ್ನು ಮುಂದಿನ ಚಿಕಿತ್ಸೆಗಾಗಿ ನಿಗದಿತ ಕೋವಿಡ್ ಆಸ್ಪತ್ರೆಗೆ ಕರೆತರಲು ಬಂದಿರುವ ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳ ಮೇಲೆ ಸಾರ್ವಜನಿಕರು ಮಾರಣಾಂತಿಕ ಹಲ್ಲೆ ನಡೆಸಿರುತ್ತಾರೆ.
ಈ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.