ಬಿಸಿ ಬಿಸಿ ಸುದ್ದಿ

ಮುಳಸಾವಳಗಿಯ ಕಾಯಕ ದಾಸೋಹ ಪ್ರತಿಷ್ಠಾನದ ದಶಮಾನೋತ್ಸವ ಸಂಭ್ರಮ 25 ರಂದು

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮುಳಸಾವಳಗಿಯ ಕಾಯಕ ದಾಸೋಹ ಪ್ರತಿಷ್ಠಾನದ ದಶಮಾನೋತ್ಸವ ಸಂಭ್ರಮವನ್ನು ಮೇ 25 ರಂದು ಸಂಜೆ 5 ಗಂಟೆಗೆ ಗ್ರಾಮದ ಕಂಬಿ ಮಲ್ಲಯ್ಯ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.

ಗದಗ-ಡಂಬಳ ತೋಂಟದಾರ್ಯ ಮಠದ ಪೂಜ್ಯಶ್ರೀ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಬೀದರ್ ಬಸವ ಮಂಟಪದ ಸತ್ಯವತಿ ಮಾತಾಜಿ ನೇತೃತ್ವ ವಹಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಸೋಮನಗೌಡ ಬಿ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದೇವೇಳೆಯಲ್ಲಿ ಕಲಬುರಗಿಯ ಲೇಖಕ ಸೂರ್ಯಕಾಂತ ಸೊನ್ನದ ರಚಿಸಿರುವ ಕಲ್ಯಾಣ ಶರಣರ ಉದಾತ್ತ ಚಿಂತನೆಗಳು ಎಂಬ ಕೃತಿಯನ್ನು ಸಂಸದೀಯ ಕಾರ್ಯದರ್ಶಿ ದೇವಾನಂದ ಎಫ್. ಚಹ್ವಾಣ ಕೃತಿ ಅನಾವರಣಗೊಳಿಸಲಿದ್ದು, ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಕೃತಿ ಕುರಿತು ಮಾತನಾಡಲಿದ್ದಾರೆ. ಶರಣ ಮಾರ್ಗ ಪತ್ರಿಕೆಯ ಸಂಪಾದಕ ಶಿವರಂಜನ್ ಸತ್ಯಂಪೇಟೆ ಅವರು, ಇತ್ತೀಚಿಗೆ ಲಿಂಗೈಕ್ಯರಾದ ಇಳಕಲ್ ಶ್ರೀ, ಗದಗ-ಡಂಬಳ ಶ್ರೀ, ಶತಾಯುಷಿ ಶಿವಕುಮಾರ ಸ್ವಾಮೀಜಿ, ಮಾತೆ ಮಹಾದೇವಿ ಕುರಿತು ಜಗದ ಬೆಳಕು ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಮ್ಮೂರಿನ ನಕ್ಷತ್ರಗಳ ಕುರಿತು ಎಸ್.ಡಿ. ನಾಗರಳ್ಳಿ ಕೂಡ ಉಪನ್ಯಾಸ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ರತ್ನ ಪ್ರಶಸ್ತಿ ಪ್ರದಾನ, ಸಾಧಕರಿಗೆ- ನಿವೃತ್ತರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದ್ದು, ಕೃಷಿ ಸಮಾವೇಶ, ಗೀಗಿಪದ ಕಾರ್ಯಕ್ರಮ ಸೇರಿದಂತೆ ಹತ್ತು ಹಲವು ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಶಮಾನೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಾನದ ಕಾರ್ಯಕ್ರಮದಲ್ಲಿ ಹಲವು ರಾಜಕೀಯ ಧುರೀಣರು, ಗ್ರಾಮದ ಮುಖಂಡರು, ಯುವಕರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago