ಬಿಸಿ ಬಿಸಿ ಸುದ್ದಿ

ಕಲಬುರಗಿ: ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲಬುರಗಿ: ಜಿಲ್ಲಾ ಪಂಚಾಯತಿಯಿಂದ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅವಶ್ಯಕತೆಯಿರುವ ಬರಗಾಲ ತಂತ್ರಜ್ಞರು (ಬಿ.ಎಫ್.ಟಿ.) 9 ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ವಯೋಮಿತಿ 45 ವರ್ಷದೊಳಗಿರಬೇಕು. ಮಾಸಿಕ 12,000 ರೂ.ಗಳ ವೇತನ ನೀಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಪಂಚಾಯತ್ ನರೇಗಾ ಶಾಖೆಯಿಂದ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 05.30 ಗಂಟೆಯವರೆಗೆ ನಿಗದಿತ ನಮೂನೆಯ ಅರ್ಜಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2020ರ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸ್ಕ್ರೀನಿಂಗ್ ಟೆಸ್ಟ್ ((Screening Test) ಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ದಿನಾಂಕ ತಿಳಿಸಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482046044, 9480866010 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಮಾಜಿ ಸೈನಿಕರಿಗೆ ಎನ್.ಡಿ.ಆರ್.ಎಫ್./ ಹೆಚ್.ಡಿ.ಎಫ್.ನಲ್ಲಿ ಉದ್ಯೋಗಾವಕಾಶ

ಕಲಬುರಗಿ: ಜಿಲ್ಲೆಯಲ್ಲಿ ವಾಸವಾಗಿರುವ ಮಾಜಿ ಸೈನಿಕರಿಗೆ ಎನ್.ಡಿ.ಆರ್.ಎಫ್./ ಹೆಚ್.ಡಿ.ಎಫ್. (ಓಆಖಈ/ಊಆಈ) ನಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗಿದೆ. ಇಚ್ಚೆಯುಳ್ಳ 45 ವರ್ಷದೊಳಗಿನ ಮಾಜಿ ಸೈನಿಕರು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರನ್ನು ಅಥವಾ ಆರ್ಮಿ ಪ್ಲೇಸ್‍ಮೆಂಟ್ ನೋಡಲ್ ಸೆಂಟರ್, ಕಬ್ಬನ್ ರೋಡ್, ಬೆಂಗಳೂರು Army Placement Nodal Centre, Cubbon Road, Akashvani Bengaluru ವಿಳಾಸಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಕರಿಗೆ ಬಡ್ತಿ: ಅಂತಿಮ ಜೇಷ್ಠತಾ ಪಟ್ಟಿ ಪ್ರಕಟ

ಕಲಬುರಗಿ: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 2018 ಹಾಗೂ 2019 ನೇ ಸಾಲಿನ ಬ್ಲಾಕ್ ಅವಧಿಗೆ ಪ್ರತ್ಯೇಕವಾಗಿ ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಅವರು ತಿಳಿಸಿದ್ದಾರೆ.

ಶಿಕ್ಷಕರ ಬಡ್ತಿಗಾಗಿ 2018 ಬ್ಲಾಕ್ ಅವಧಿಯ (2018ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ) ಹಾಗೂ 2019ನೇ ಬ್ಲಾಕ್ ಅವಧಿಗೆ (2019ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ) ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ddpikalaburagi.in/seniority.aspx ವೆಬ್‍ಸೈಟ್‍ನಲ್ಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago