ಕಲಬುರಗಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಸ್ಥಾಪನೆಗೆ ಆಗ್ರಹ

0
132

ಕಲಬುರಗಿ: ಜಿಲ್ಲೆಯ ಇಎಸ್ಐಸಿ ವೈದ್ಯಕೀಯ ಕಾಲೇಜಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ ಶಾಖೆಯ ಸ್ಥಾಪಿಸಬೇಕೆಂದು ಮಾನವ ಹಕ್ಕುಗಳ ಹೋರಾಟಗಾರರಾದ ಸಂಘದ ಸದಸ್ಯರಾದ ಮಹಮ್ಮದ್ ರೀಯಾಜ್ ಖತೀಬ್ ಅವರ ನೇತೃತ್ವದ ತಂಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ರಾಜ್ಯದಲ್ಲಿ ಕಲಬುರಗಿ ಜಿಲ್ಲೆ ಆರೋಗ್ಯ ಕ್ಷೇತ್ರದ ಮೂಲಸೌಕರ್ಯಗಳಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆಯಾಗಿದೆ ಎಂದು ಸಿದ್ದು ವಿ.ಎಚ್ ಇತರೆ ಸಂಶೋಧಕರು ನೀಡಿದ ವರದಿಯಲ್ಲಿ ಸ್ಪಷ್ಟವಾಗಿದ್ದು, ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದ ಕಲಬುರಗಿ ಜಿಲ್ಲೆಯನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಹೆಚ್ವು ಒತ್ತು ನೀಡುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಕಲ್ಯಾಣ ಕರ್ನಾಟಕದ ಶಾಸಕರು ಸಚಿವರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳು ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗಾಗಿ ಇಎಸ್ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾಕಷ್ಟು ಸ್ಥಳಾವಕಾಶ ಮತ್ತು ಯಂತ್ರೋಪಕರಣಗಳು ಲಭ್ಯವಿರುವುದರಿಂದ ಈ ಸ್ಥಳದಲ್ಲಿ ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಾಪನೆಗೆ ಜಿಲ್ಲಾಯ ಶಾಸಕರು ಮತ್ತು ಸಂಸದರು ಮತ್ತು ರಾಜಕೀಯ ಜನಪ್ರತಿನಿಧಿಗಳು ಈ ವಿಷಯ ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಸಂಘದ ಕಾರ್ಯದರ್ಶಿಯಾದ ಶೇಖ್ ಮುನಿರುದ್ದೀನ್, ಪಟೇಲ ಅಜರುದ್ದೀನ್, ಅಬ್ದುಲ್ ಮನ್ನಾನ್ ಖಾನ್, ಮಹಮ್ಮದ್ ರಯಿಸೊದ್ದೀನ್ ಖಾಸದಾರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here