ಸುರಪುರ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಎರಡನೆ ಅವಧಿ ಮುಗಿದು ತೆರವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೂರನೆ ಅವಧಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು.
ಮೂರನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಗೊಳಿಸಲಾಗಿತ್ತು.
ಚುನಾವಣಾಧಿಕಾರಿಗಳಾಗಿದ್ದ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.ಆದರೆ ಅಧ್ಯಕ್ಷ ಸ್ಥಾನಕ್ಕೆ ದೇವಣ್ಣ ಮಲಗಲದಿನ್ನಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ದುರ್ಗಪ್ಪ ಗೋಗಿಕರ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಸಂಗನಗೌಡ ಸೂಚಿಸಿ, ಬಸವರಾಜ ಆರ್ಯಶಂಕರ ಅನುಮೋದಿಸಿದರು ಉಪಾಧ್ಯಕ್ಷ ಸ್ಥಾನಕ್ಕೆ ಅಪ್ಪಾಸಾಹೇಬ ಗೌಡ ಸೂಚಿಸಿ ಮಲ್ಲಿಕಾರ್ಜುನಗೌಡ ಅನುಮೋದಿಸಿದರು.೧೨ ಗಂಟೆಯ ವೇಳೆಗೆ ಇಬ್ಬರನ್ನು ಹೊರತುಪಡಿಸಿ ಬೇರಾವುದೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಮೂರನೆ ಅವಧಿಗೆ ಅಧ್ಯಕ್ಷರಾಗಿ ದೇವಣ್ಣ ಮಲಗಲದಿನ್ನಿ ಹಾಗು ಉಪಾಧ್ಯಕ್ಷರಾಗಿ ದುರ್ಗಪ್ಪ ಗೋಗಿಕರ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಗೌರವಿಸಿ ಶುಭ ಕೋರಿದರು,ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ,ಕಿಶೋರಚಂದ್ ಜೈನ್ ಸೇರಿದಂತೆ ಎಲ್ಲಾ ಸದಸ್ಯರುಗಳಿದ್ದು ಶುಭ ಕೋರಿದರು.
ಸಂಭ್ರಮಾಚಾರಣೆ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಚುಕ್ಕಾಣೆ ಹಿಡಿಯುತ್ತಿದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ (ತಾತಾ),ಯುವ ಮುಖಂಡ ಹಣಮಂತ ನಾಯಕ(ಬಬ್ಲುಗೌಡ), ಜಿಪಂ.ಸದಸ್ಯರಾದ ಮರಿಲಿಂಗ ಕರ್ನಾಳ, ಬಸವರಾಜ ಸ್ಥಾವರಮಠ ಮುಖಂಡರಾದ ಎಚ್.ಸಿ.ಪಾಟೀಲ್, ಕಿಶೋರಚಂದ ಜೈನ್, ದೊಡ್ಡ ದೇಸಾಯಿ, ಯಲ್ಲಪ್ಪ ಕುರುಕುಂದಿ, ಡಾ: ಬಸನಗೌಡ ಪಾಟೀಲ್ ಹಳ್ಳಿಕೋಟಿ, ನಗರಸಭೆ ಸದಸ್ಯರಾದ ವೇಣುಮಾಧವ ನಾಯಕ, ನರಸಿಂಹಕಾಂತ ಪಂಚಮಗಿರಿ ಭೂ ನ್ಯಾಯ ಮಂಡಳಿ ಸದಸ್ಯರಾದ ಪಾರಪ್ಪ ಗುತ್ತೇದಾರ, ಬಲಭೀಮನಾಯಕ, ಶಂಕರನಾಯಕ, ಈಶ್ವರನಾಯಕ, ಶರಣುನಾಯಕ ಬೈರಮಡ್ಡಿ ಸೇರಿದಂತೆ ಎಪಿಎಂಸಿ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…