ದ್ವಿತೀಯ ಪಿಯುಸಿ ಇಂಗ್ಲೀಷ ವಾರ್ಷಿಕ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

0
42

ಕಲಬುರಗಿ: ನಗರದ 25 ಹಾಗೂ ಇತರ ತಾಲೂಕು ಕೇಂದ್ರಗಳ 22 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 47 ಪರೀಕ್ಷಾ ಕೇಂದ್ರಗಳಲ್ಲಿ 2020ರ ಜೂನ್ 18 ರಂದು ದ್ವಿತೀಯ ಪಿ.ಯು.ಸಿ. ಇಂಗ್ಲೀಷ್ ವಾರ್ಷಿಕ ಪರೀಕ್ಷೆ ನಡೆಯಲಿವೆ.

ಈ ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಶರತ್ ಬಿ. ಅವರು 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಈ ಆದೇಶ ಹೊರಡಿಸಿದ್ದಾರೆ.

Contact Your\'s Advertisement; 9902492681

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು, ಮೊಬೈಲ್ ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂ ವೈರ್‍ಲೆಸ್ ಸೆಟ್‍ಗಳು ಸೇರಿದಂತೆ ಮತ್ತಿತರ ಇಲೆಕ್ಟ್ರಾನಿಕ್ಸ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲ ಜಿರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here