ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳ ಪರೀಕ್ಷೆ: ವಸತಿನಿಲಯಗಳ ಪ್ರಾರಂಭಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (K V S) ಆಗ್ರಹ

ಕಲಬುರಗಿ : ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ಸಮಾಜ ಕಲ್ಯಾಣ ಇಲಾಖೆಯ ಹಾಗೂ ಅಲ್ಪಸಂಖ್ಯಾತರ ವಸತಿ ನಿಲಯಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿರುವ b.ed ವಿದ್ಯಾರ್ಥಿಗಳ  ಜುಲೈ 15 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಹಾಗೂ ಬೇರೆಯ ಜಿಲ್ಲೆಯಿಂದ ಬಂದಿರುವ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅದರಲ್ಲಿ ಅವರುಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ಸಮಾಜ ಕಲ್ಯಾಣ ಇಲಾಖೆಯ ಹಾಗೂ ಅಲ್ಪಸಂಖ್ಯಾತರ ವಸತಿ ನಿಲಯಗಳನ್ನು ಹೆಚ್ಚಾಗಿ ಅವಲಂಬಿಸಿದ್ದು ಕೂಡಲೇ ಮೂರು ಇಲಾಖೆಗಳ ವಸತಿ ನಿಲಯಗಳನ್ನು ಪ್ರಾರಂಭಿಸಲು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸುತ್ತದೆ.

ಕಲಬುರಗಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಜಾಸ್ತಿಯಾಗುತ್ತಿದ್ದು ಇದನ್ನು ತಡೆಯಲು ಮೂರು ಇಲಾಖೆಗಳು ರಾತ್ರಿ-ಹಗಲು ಎನ್ನದೇ ಸೇವೆ ಸಲ್ಲಿಸುತ್ತಿರುವುದು ಅಭಿನಂದನಾರ್ಹ ಕೆಲಸವಾಗಿದೆ. ಬಹುತೇಕ ವಸತಿ ನಿಲಯಗಳನ್ನು ಕ್ವಾರಟೈನ್ ಕೇಂದ್ರವನ್ನಾಗಿ ಮಾಡಲಾಗಿತ್ತು ಆದ್ದರಿಂದ ಎಲ್ಲಾ ವಸತಿ ನಿಲಯಗಳಿಗೆ ಔಷಧಿಯನ್ನು ಸಿಂಪಡಿಸಿ ಸ್ವಚ್ಛಗೊಳಿಸಬೇಕು ಹಾಗೂ ಹೊಸ ಹಾಸಿಗೆ, ಹೊದಿಕೆ, ಬೆಡ್ ಕೋಡಬೇಕು ಮತ್ತು ಸ್ಯಾನಿಟೈಜರ್ ,ಮಾಸ್ಕ್, ಹಾಗೂ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಈ ಸಧ್ಯ ಪರೀಕ್ಷೆ ಇರುವ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳನ್ನ ತೆರೆದು ಕೊಠಡಿಗೆ ಒಬ್ಬರಂತೆ ಅವಕಾಶ ನೀಡಿ ಊಟದ ವ್ಯವಸ್ಥೆಯನ್ನೂ ಮಾಡಬೇಕು.

ಇದರಿಂದ ದೈಹಿಕ ಅಂತ ಕಾಪಾಡಿಕೊಳ್ಳಲು ಸಹಯಾವಾಗುತ್ತದೆ. ಈ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (K.V.S) ಜಿಲ್ಲಾ ಸಂಚಾಲಕರಾದ ರಾಜೇಂದ್ರ ರಾಜವಾಳ, ಶರಣು ಕೋಲಿ , ನಾಗರಾಜ ಯಡ್ರಾಮಿ ಆಗ್ರಹಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago