ಕಲಬುರಗಿ: ಮಹಾಮಾರಿ ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಮಾಸ್ಕ್ ದಿನಾಚರಣೆ ಅಂಗವಾಗಿ ಗುರುವಾರ ಕಲಬುರಗಿ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಸಂಸದ ಡಾ.ಉಮೇಶ ಜಾಧವ ಚಾಲನೆ ನೀಡಿದರು.
ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಸಂಸದ ಡಾ.ಉಮೇಶ ಜಾಧವ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್.ಸತೀಷಕುಮಾರ, ಡಿ.ಸಿ.ಪಿ. ಕಿಶೋರ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ.ರಾಜಾ, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎ.ಜಬ್ಬಾರ್ ಸೇರಿದಂತೆ ಜಿಮ್ಸ್ ವಿದ್ಯಾರ್ಥಿಗಳು ಕೈಯಲ್ಲಿ ಕೊರೋನಾ ನಿಯಂತ್ರಣದ ಸ್ಲೋಗನ್‍ಗಳುಳ್ಳ ಭಿತ್ತಿಪತ್ರಗಳನ್ನು ಹಿಡಿದು ಜನರಲ್ಲಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಸಂಸದ ಡಾ. ಉಮೇಶ್ ಜಾಧವ ಅವರು ಮಾತನಾಡಿ, ಕಡ್ಡಾಯವಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು, ಅಂದಾಗ ಮಾತ್ರ ಕೊರೋನಾ ಸೋಂಕಿನಿಂದ ಶೇ.75ರಷ್ಟು ರಕ್ಷಣೆ ಪಡೆಯಬಹುದು. 20 ರಿಂದ 30 ಸೆಕೆಂಡ್ ವರೆಗೆ ಕೈ ತೊಳೆದುಕೊಳ್ಳುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ನಮ್ಮ ಜೀವನದ ಭಾಗವಾಗಬೇಕಿದೆ. ಮುಂದಿನ 6 ತಿಂಗಳು ಕೊರೋನಾ ವಿರುದದ ನಮ್ಮ ಹೋರಾಟ ನಿರಂತರ ನಡೆಯಬೇಕಿದೆ. ಸೋಂಕಿನಿಂದ ಭಯಪಟ್ಟು ಮನೆಯಲ್ಲಿ ಕುಳಿತುಕೊಳ್ಳುವ ಸಮಯ ಇದಲ್ಲ, ಬದಲಾಗಿ ಎಚ್ಚರಿಕೆ ಮತ್ತು ಸುರಕ್ಷತಾ ಕ್ರಮವಹಿಸಿ ಆರ್ಥಿಕ ಚೇತರಿಕೆ ಕಾಣಬೇಕು ಮತ್ತು ಮಾನವಕುಲಕ್ಕೆ ಕಂಟಕವಾಗಿರುವ ಕೊರೋನಾವನ್ನು ಓಡಿಸಬೇಕಾಗಿದೆ. ದೇಶದಲ್ಲಿ ಕೊರೋನಾ ಸೊಂಕಿನಿಂದ ಮೃತಪಟ್ಟವರ ಮರಣ ಪ್ರಮಾಣ ಕಡಿಮೆಯಿದ್ದು, ಜಿಲ್ಲೆಯಲ್ಲಿ ಕೊರೋನಾ ಹತೋಟಿಯಲ್ಲಿದೆ. ಹೀಗಾಗಿ ಯಾರು ಭಯ ಪಡಬೇಕಿಲ್ಲ ಎಚ್ಚರಿಕೆ ಕ್ರಮ ವಹಿಸಿದರೆ ಸಾಕು ಎಂದರು.
ಮಾಸ್ಕ್ ಧರಿಸದಿದ್ದರೆ 200 ರೂ. ದಂಡ: ಕೊರೋನಾ ನಿಯಂತ್ರಣಕ್ಕೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಓಡಾಡಬೇಕು. ಇಲ್ಲದಿದ್ದರೆ 200 ರೂ. ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಎಚ್ಚರಿಕೆ ನೀಡಿದರು.
ಕೊರೋನಾ ವಿರುದ್ಧದ ಹೋರಾಟಕ್ಕೆ ಮಾಸ್ಕ್ ಧರಿಸಿಸುವುದೇ ನಮ್ಮ ಮೊದಲ ಅಸ್ತ್ರವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವುದಲ್ಲದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೋನಾ ಹರಡದಂತೆ ಎಚ್ಚರಿಕೆ ವಹಿಸುವುದು ಮುಖ್ಯ ಎಂದರು.
ಜ್ವರ, ನೆಗಡಿ, ಕೆಮ್ಮು, ಉಸಿರಾಟದ ಸಮಸ್ಯೆ ಕಂಡುಬಂದರೆ ಕೂಡಲೇ ಫೀವರ್ ಕ್ಲೀನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೆ ಒಳಪಡಬೇಕು. ಕೊರೋನಾ ಕುರಿತು ಆಲಸ್ಯ ಮಾಡಿದಲ್ಲಿ ಕೆಟ್ಟ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ಕಿವಿಮಾತು ಹೇಳಿದರು.
ಜಿಲ್ಲಾಡಳಿತದಿಂದ ಆಯೋಜಿಸಿದ ಈ ಜಾಥಾಗೆ ಕಲಬುರಗಿ ನಗರ ಪೊಲೀಸ್ ಮತ್ತು ಜಿಮ್ಸ್ ಕಾಲೇಜು ವಿದ್ಯಾರ್ಥಿಗಳು ಸಹಯೋಗ ನೀಡಿದರು.
ಜಾಥಾದಲ್ಲಿ ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಫಿಯೂದ್ದಿನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಟರಾವ ಇಟಗಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಅರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಮಾನವ ರಿಂಗ್: ಜಾಥಾದಲ್ಲಿ ಭಾಗವಹಿಸಿದ ಜಿಮ್ಸ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣ ಪ್ರವೇಶಿಸುತ್ತಿದ್ದಂತೆ ವಿದ್ಯಾರ್ಥಿಗಳು ಗೋಲಾಕಾರದಲ್ಲಿ ನಿಂತು ಮಾನವ ರಿಂಗ್ ಏರ್ಪಡಿಸಿ ಕೈಯಲ್ಲಿ ಭಿತ್ತಿ ಪತ್ರ ಹಿಡಿದು ಅರಿವು ಮೂಡಿಸುವ ಮೂಲಕ ಗಮನ ಸೆಳೆದರು.
ಮಾಸ್ಕ್ ವಿತರಣೆ: ಜಾಥಾ ಸಂದರ್ಭದಲ್ಲಿ ಮಾಸ್ಕ್ ಇಲ್ಲದೆ ರಸ್ತೆ ಮೇಲೆ ಓಡಾಡುತ್ತಿದ್ದ ಜನರಿಗೆ ಸಂಸದ ಡಾ.ಉಮೇಶ ಜಾಧವ ಅವರು ಮಾಸ್ಕ್ ವಿತರಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…